Sunday, May 5, 2024
Homeತಾಜಾ ಸುದ್ದಿಹಿಂದೂ ಕಾರ್ಯಕರ್ತ ಪುನೀತ್  ಕೆರೆಹಳ್ಳಿ ಆಸ್ಪತ್ರೆಗೆ ದಾಖಲು; ಆರೋಗ್ಯ ವಿಚಾರಿಸಿದ  ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ

ಹಿಂದೂ ಕಾರ್ಯಕರ್ತ ಪುನೀತ್  ಕೆರೆಹಳ್ಳಿ ಆಸ್ಪತ್ರೆಗೆ ದಾಖಲು; ಆರೋಗ್ಯ ವಿಚಾರಿಸಿದ  ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ

spot_img
- Advertisement -
- Advertisement -

ಬೆಂಗಳೂರು:ಕಾಂಗ್ರೆಸ್ ಸರ್ಕಾರ  ವಿನಾಃ ಕಾರಣ ತನ್ನನ್ನು ಗೂಂಡಾ ಕಾಯ್ದೆಯಲ್ಲಿ ಸಿಲುಕುವಂತೆ ಮಾಡಿದೆ. ಹೀಗಾಗಿ ನನಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಹಿಂದೂ ಕಾರ್ಯಕರ್ತ ಪುನೀತ್ ಕೇರೆಹಳ್ಳಿ ಅನಿರ್ದಿಷ್ಟಾವಧಿಯವರೆಗೂ ಉಪವಾಸ ಕೈಗೆತ್ತಿಕೊಂಡಿದ್ದರು. ಇದೀಗ ಅವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಸ್ಪತ್ರೆಯಲ್ಲಿರುವ ಪುನೀತ್ ಅವರನ್ನು ಇಂದು  ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ, ಸುಳ್ಯ ಶಾಸಕಿ ಭಾಗೀರತಿ ಮುರುಳ್ಯ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಹಾಗೂ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಹಾಗೂ ಬಿಜೆಪಿ ಮುಖಂಡ ಭಾಸ್ಕರ್ ರಾವ್ ಭೇಟಿಯಾಗಿ ಆತ್ಮಸ್ಥೈರ್ಯ ತುಂಬಿದರು

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಸಮಾಜಘಾತುಕ ಜಿಹಾದಿಗಳನ್ನು ಅಮಾಯಕರೆಂದು ಬಿಡುಗಡೆ ಮಾಡುವ ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ, ನಕಲಿ ಪ್ರಕರಣಗಳನ್ನು ದಾಖಲಿಸಿ ಮಾನಸಿಕವಾಗಿ ಹಿಂಸೆ ನೀಡುತ್ತಿದೆ. ಹಿಂದೂ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿ ಮೇಲಿನ ಆರೋಪಗಳು ಸಾಬೀತಾಗದಿದ್ದರೂ ಆತನ ವಿರುದ್ಧ ಬೇರೆ ಪ್ರಕರಣಗಳಲ್ಲಿ ಸಿಲುಕಿಸಿ ಸರ್ಕಾರ ಹತ್ತಿಕ್ಕುವ ಕೃತ್ಯವೆಸಗುತ್ತಿದೆ ಎಂದು ಆರೋಪಿಸಿದೆ

- Advertisement -
spot_img

Latest News

error: Content is protected !!