- Advertisement -
![]()
- Advertisement -
ಉಡುಪಿ: ಪ್ರಖ್ಯಾತ ಭಜನಾ ತರಬೇತುದಾರ ಪ್ರಕಾಶ್ ಕುಲಾಲ್ (35) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ನಡೂರು ಗ್ರಾಮದ ನಿವಾಸಿಯಾಗಿರುವ ಪ್ರಕಾಶ್ ಕುಲಾಲ್ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ. ಸಾವನ್ನಪ್ಪಿದ್ದಾರೆ .
ಅತ್ಯಂತ ಚುರುಕಿನ, ಪ್ರತಿಭಾಶಾಲಿ ಯುವ ಭಜನಾ ತರಬೇತುದಾರರಾಗಿದ್ದ ಪ್ರಕಾಶ್ ಕುಲಾಲ್ ನಡೂರು ಭಜನಾ ಕಾರ್ಯಕ್ರಮ ಮುಗಿಸಿ ಮನೆಗೆ ಬಂದು ಮಲಗಿದ್ದರು. ನಂತರ ಬೆಳಿಗ್ಗೆ ಅವರಿಗೆ ಆತ್ಮೀಯರೊಬ್ಬರು ಕರೆ ಮಾಡಿದಾಗ ಕರೆ ಸ್ವೀಕರಿಸದಿದ್ದಾಗ ಅನುಮಾನಗೊಂಡು ಮನೆಯ ಮಾಡಿನ ಹೆಂಚು ತೆಗೆದು ಒಳಗೆ ಹೋಗಿ ನೋಡಿದಾಗ ಹೃದಯಾಘಾತದಿಂದ ಮಲಗಿದ್ದಲ್ಲೇ ಸಾವನ್ನಪ್ಪಿದ್ದಾರೆ.
ಅತಿದೊಡ್ಡ ಭಜನಾ ಕಾರ್ಯಕ್ರಮಗಳಲ್ಲಿ ಒಂದಾದ ಸಂಕೀರ್ತನ ಮಂದಾರ್ತಿ ಸೇರಿ ಹತ್ತು ಹಲವು ಕಡೆಗಳಲ್ಲಿ ತಮ್ಮನ್ನು ಭಜನೆಗಾಗಿ ಸಮರ್ಪಿಸಿಕೊಂಡ ಯುವಕ ಪ್ರಕಾಶ್ ಕುಲಾಲ್.
- Advertisement -


