Thursday, June 13, 2024
Homeಕರಾವಳಿಮಂಗಳೂರು ವಿವಿ ಕಾಲೇಜಿನಲ್ಲಿ 'ಭಾರತ ಮಾತಾ ಪೂಜನ' ಕಾರ್ಯಕ್ರಮ ವಿವಾದ ವಿಚಾರ: ಜಿಲ್ಲಾಧಿಕಾರಿಗೆ ದೂರು ನೀಡಿದ...

ಮಂಗಳೂರು ವಿವಿ ಕಾಲೇಜಿನಲ್ಲಿ ‘ಭಾರತ ಮಾತಾ ಪೂಜನ’ ಕಾರ್ಯಕ್ರಮ ವಿವಾದ ವಿಚಾರ: ಜಿಲ್ಲಾಧಿಕಾರಿಗೆ ದೂರು ನೀಡಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ

spot_img
- Advertisement -
- Advertisement -

ಮಂಗಳೂರು:  ವಿವಿ ಕಾಲೇಜಿನಲ್ಲಿ ‘ಭಾರತ ಮಾತಾ ಪೂಜನ’ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮದ ವಿರುದ್ದ ದ‌.ಕ ಜಿಲ್ಲಾಧಿಕಾರಿಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದೂರು ನೀಡಿದೆ. ಕಾರ್ಯಕ್ರಮ ರದ್ದು ಪಡಿಸುವಂತೆ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರರಿಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮನವಿ ಮಾಡಿದೆ.

ವಿವಿ ಕಾಲೇಜು ಕಾರ್ಯಕ್ರಮದ ಪೋಸ್ಟರ್ ನಲ್ಲಿ ಭಾರತ ಮಾತೆ ಕೇಸರಿ ಧ್ವಜ ಹಿಡಿದ ಚಿತ್ರವಿದೆ, ಭಾರತ ಮಾತೆ ಕೇಸರಿ ಧ್ವಜ ಹಿಡಿದ ಫೋಟೋ ಬಳಸಿದ್ದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಅಗಸ್ಟ್ 11ರಂದು ಕಾಲೇಜಿನ‌ ವಿದ್ಯಾರ್ಥಿ ಸಂಘದಿಂದ ಭಾರತ ಮಾತಾ ಪೂಜನಾ ಕಾರ್ಯಕ್ರಮ ಅಯೋಜನೆ ಮಾಡಿದೆ. ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಆಯೋಜನೆ ಮಾಡಲಾಗಿದೆ. ಆದರೆ ಭಾರತ ಮಾತೆಯ ಕೈಯ್ಯಲ್ಲಿ ರಾಷ್ಟ್ರಧ್ವಜದ ಬದಲು ಭಗವಾಧ್ವಜ ಹಿಡಿದಿರೋ ಚಿತ್ರ ಬಳಸಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ವಿದ್ಯಾರ್ಥಿಗಳ‌ ಮಧ್ಯೆ ಬಿರುಕು ಮೂಡಿಸುವ ಕಾರ್ಯಕ್ರಮ ರದ್ದುಪಡಿಸುವಂತೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆಗ್ರಹಿಸಿದೆ.

- Advertisement -
spot_img

Latest News

error: Content is protected !!