- Advertisement -
- Advertisement -
ಮಂಗಳೂರಿನಲ್ಲಿ ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ ಬಗ್ಗೆ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಡಾ.ಭರತ್ ಶೆಟ್ಟಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ರಾಹುಲ್ ಗಾಂಧಿ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ್ದಕ್ಕಾಗಿ ಜುಲೈ 8ರಂದು ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಭರತ್ ಶೆಟ್ಟಿ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ನೀಡಿದೆ.
- Advertisement -