Wednesday, May 22, 2024
Homeಕರಾವಳಿಉಡುಪಿಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ : ಜಿಲ್ಲಾ ಕೋರ್ಟ್ ತೀರ್ಪು ಪ್ರಶ್ನಿಸಿ ಹೈಕೋರ್ಟ್...

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ : ಜಿಲ್ಲಾ ಕೋರ್ಟ್ ತೀರ್ಪು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ರಾಜೇಶ್ವರಿ ಶೆಟ್ಟಿ ಹಾಗೂ ನವನೀತ್ ಶೆಟ್ಟಿ

spot_img
- Advertisement -
- Advertisement -

ಉಡುಪಿ: ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಆರೋಪಿಗಳಾದ ರಾಜೇಶ್ವರಿ ಶೆಟ್ಟಿ ಹಾಗೂ ನವನೀತ ಶೆಟ್ಟಿ ಮೇಲ್ಮನವಿ ಹಾಗೂ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದಾರೆ.

;;

2016ರಲ್ಲಿ ನಡೆದ ಈ ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂ.8ರಂದು ಮಹತ್ವದ ತೀರ್ಪು ನೀಡಿ, ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಹಾಗೂ ಜೋತಿಷ್ಯ ನಿರಂಜನ್ ಭಟ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅದರಂತೆ ಈ ಮೂವರು ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.

;;

ಈ ತೀರ್ಪಿನ ವಿರುದ್ಧ ಜು.5ರಂದು ರಾಜೇಶ್ವರಿ ಶೆಟ್ಟಿ ಹಾಗೂ ಜು.7ರಂದು ನವನೀತ್ ಶೆಟ್ಟಿ ಮೇಲ್ಮನವಿ ಹಾಗೂ ತಡೆಯಾಜ್ಞೆ ನೀಡಬೇಕು ಮತ್ತು ತಮಗೆ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆಯು ಮೂರು ವಾರದ ಬಳಿಕ ನಡೆಯುವ ಸಾಧ್ಯತೆಗಳಿವೆ. ಇನ್ನೋರ್ವ ಆರೋಪಿ ನಿರಂಜನ್ ಭಟ್ ಈವರೆಗೆ ಅರ್ಜಿ ಹಾಕಿಲ್ಲ ಎಂದು ಮೂಲಗಳು ತಿಳಿಸಿವೆ.

- Advertisement -
spot_img

Latest News

error: Content is protected !!