ಬೆಳ್ತಂಗಡಿ: ಜ. 31 ರಂದು ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಭಾಸ್ಕರ ಹೆಗಡೆ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಉಜಿರೆ ಎಸ್ ಡಿ ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಭಾಸ್ಕರ ಹೆಗಡೆ ಅವರು ತಮ್ಮ 33 ವರ್ಷಗಳ ಪ್ರಾಧ್ಯಾಪಕ ವೃತ್ತಿಯಿಂದ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಅಧ್ಯಾಪಕರು, ವಿದ್ಯಾರ್ಥಿ ಬಳಗ ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಯೋಗದಲ್ಲಿ ‘ಭಾಸ್ಕರ ಪರ್ವ – ಮಾಧ್ಯಮ ಗುರುವಿಗೆ ಅಭಿನಂದನೆ’ ಎಂಬ ವಿಶೇಷ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಮಾರಂಭದ ಉದ್ಘಾಟನೆ ಹಾಗೂ ಅಭಿನಂದನಾ ಗ್ರಂಥದ ಬಿಡುಗಡೆಯನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ ಚಂದ್ರ ಎಸ್. ಅವರು ನೆರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಾಕ್ಷ್ಯ ಚಿತ್ರದ ಬಿಡುಗಡೆಯನ್ನು ಕ್ಷೇಮವನ, ಬೆಂಗಳೂರು ಇದರ ಕಾರ್ಯನಿರ್ವಹಕ ನಿರ್ದೇಶಕಿ ಶ್ರೀಮತಿ ಶ್ರದ್ಧಾ ಅಮಿತ್ ಅವರು ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ. ಪಿ ಅವರು ವಹಿಸಲಿದ್ದಾರೆ. ಸಮಾರಂಭದಲ್ಲಿ ಉಜಿರೆ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಭಾಸ್ಕರ ಹೆಗಡೆ ಅವರು ಉಪಸ್ಥಿತರಿರುವರು.
ಈ ಕಾರ್ಯಕ್ರಮವು ಜನವರಿ 31, ಶನಿವಾರ ಬೆಳಿಗ್ಗೆ 10 ಗಂಟೆಗೆ, ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.


