Friday, June 5, 2026
Homeತಾಜಾ ಸುದ್ದಿಬೆಂಗಳೂರು; ಮಹಿಳೆಯ ಅಪಹರಣ ಪ್ರಕರಣ; ಹೈಕೋರ್ಟ್‌ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು

ಬೆಂಗಳೂರು; ಮಹಿಳೆಯ ಅಪಹರಣ ಪ್ರಕರಣ; ಹೈಕೋರ್ಟ್‌ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು

- Advertisement -
- Advertisement -

ಬೆಂಗಳೂರು; ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್‌ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದೆ.

ಇಂದು ಭವಾನಿ ರೇವಣ್ಣ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ , ಭವಾನಿ ರೇವಣ್ಣ ಅವರು ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಏಕಸದಸ್ಯ ಪೀಠ ಜಾಮೀನು ನೀಡಿದೆ.

ಪೊಲೀಸರ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಅವರು ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ. ಸಂತ್ರಸ್ತೆಗೆ ಊಟ ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನು ಒಪ್ಪಲಾಗುವುದಿಲ್ಲ ಕೋರ್ಟ್‌ ಹೇಳಿದೆ.

ಮೈಸೂರಿನ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದ ಸಂತ್ರಸ್ತೆಯನ್ನು ಅಪಹರಣ ಮಾಡಲಾಗಿದೆ ಎಂದು ಆಕೆಯ ಪುತ್ರ ದೂರ ದಾಖಲಿಸಿದ್ದ. ಅದರಂತೆ ಪ್ರಕರಣದಲ್ಲಿ ಭವಾನಿ ರೇವಣ್ಣ ಆರೋಪಿಯಾದ ಹಿನ್ನೆಲೆ ಎಸ್ ಐಟಿ ವಿಚಾರಣೆಗೆ ನೋಟಿಸ್ ನೀಡಿತ್ತು. ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಅರೆಸ್ಟ್ ವಾರೆಂಟ್ ಹೊರಡಿಸಿತ್ತು. ಹಾಗಾಗಿ ಭವಾನಿ ರೇವಣ್ಣ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಜಾಮೀನು ದೊರೆತಿದೆ.

- Advertisement -

Latest News

error: Content is protected !!