Tuesday, April 23, 2024
Homeಕ್ರೀಡೆಟೋಕಿಯೋ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಭಾರತದ ಮೊದಲ ಅಥ್ಲೀಟ್

ಟೋಕಿಯೋ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಭಾರತದ ಮೊದಲ ಅಥ್ಲೀಟ್

spot_img
- Advertisement -
- Advertisement -

ನವದೆಹಲಿ: ಭಾರತದ ವನಿತಾ ಫೆನ್ಸರ್‌, ತಮಿಳುನಾಡಿನ ಸಿ.ಎ. ಭವಾನಿದೇವಿ ಇತಿಹಾಸವೊಂದನ್ನು ಬರೆದಿದ್ದಾರೆ. ಟೋಕಿಯೋ ಒಲಿಂಪಿಕ್ಸ್ ಗೆ ಭವಾನಿದೇವಿ ಅರ್ಹತೆ ಪಡೆದಿದ್ದು, ಭಾರತದ ಮೊದಲ ಮಹಿಳಾ ಅಥ್ಲೀಟ್ ಆಗಿದ್ದಾರೆ.

ಅಧಿಕೃತ ಶ್ರೇಯಾಂಕ ವಿಧಾನದ ಮೂಲಕ ಟೋಕಿಯೋ ಒಲಿಂಪಿಕ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದ ಮೊದಲ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಭವಾನಿ ಪಾತ್ರರಾಗಿದ್ದಾರೆ. ಏಷ್ಯಾ ಮತ್ತು ಒಷಿನಿಯಾ ವಲಯದಿಂದ ಲಭ್ಯ ಇರುವ ಎರಡು ಸ್ಥಾನಗಳ ಪೈಕಿ ಒಂದರಲ್ಲಿ ಅವರು ಆಯ್ಕೆಯಾಗಿದ್ದಾರೆ.

ಬುಡಾಪೆಸ್ಟ್ ನಲ್ಲಿ ನಡೆದ ಪುರುಷರ ಮತ್ತು ಮಹಿಳೆಯರ ಸೇಬರ್ ವಿಶ್ವಕಪ್ ನಲ್ಲಿ ಅಧಿಕೃತ ಶ್ರೇಯಾಂಕದ ಆಧಾರದ ಮೇಲೆ ಭವಾನಿದೇವಿ ಮಹಿಳೆಯರ ವೈಯಕ್ತಿಕ ಸೇಬರ್ ನಲ್ಲಿ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಮೊದಲನೇ ಫೆನ್ಸರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಟ್ವೀಟ್ ಮಾಡಿದೆ. ಕ್ರೀಡಾ ಸಚಿನ ಕಿರಣ್‌ ರಿಜಿಜು ಕೂಡ ಭವಾನಿ ಅವರನ್ನು ಅಭಿನಂದಿಸಿದ್ದಾರೆ.

- Advertisement -
spot_img

Latest News

error: Content is protected !!