Sunday, June 7, 2026
Homeತಾಜಾ ಸುದ್ದಿಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಬಂಧನ ಭೀತಿಯಲ್ಲಿ ಪ್ರಜ್ವಲ್ ರೇವಣ್ಣ ತಾಯಿ

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಬಂಧನ ಭೀತಿಯಲ್ಲಿ ಪ್ರಜ್ವಲ್ ರೇವಣ್ಣ ತಾಯಿ

- Advertisement -
- Advertisement -

ಬೆಂಗಳೂರು:  ಮಹಿಳೆ ಅಪಹರಣ ಪ್ರಕರಣ ಸಂಬಂಧ ಭವಾನಿ ರೇವಣ್ಣ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ  ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಭವಾನಿ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ.

ಈ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಗಜಾನನ ಭಟ್ ಅವರು, ಭವಾನಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಹೀಗಾಗಿ ಭವಾನಿ ರೇವಣ್ಣಗೆ ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನದ ಭೀತಿ ಎದುರಾಗಿದೆ. ಇದರ ನಡುವೆ ಭವಾನಿ ರೇವಣ್ಣ ಕಳೆದ 15 ದಿನಗಳಿಂದ ಯಾರ ಕೈಗೂ ಸಿಗದೇ ನಾಪತ್ತೆಯಾಗಿದ್ದಾರೆ ಅಂತಾ ಹೇಳಲಾಗುತ್ತಿದೆ. ಎಸ್ ಐಟಿ ಅಧಿಕಾರಿಗಳು ನಾಳೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಆದರೆ ಆ ನೋಟಿಸ್ ಗೂ ಭವಾನಿ ಉತ್ತರ ಕೊಟ್ಟಿಲ್ಲ ಎನ್ನಲಾಗಿದೆ.

- Advertisement -

Latest News

error: Content is protected !!