- Advertisement -


- Advertisement -
ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು (48) ಅವರು ಅನಾರೋಗ್ಯದಿಂದಾಗಿ ಇಂದು (ನ.19) ವಿಧಿವಶರಾಗಿದ್ದಾರೆ.
ವಿಜಯವಾಣಿ ಪತ್ರಿಕೆಯಲ್ಲಿ ಹಲವಾರು ವರ್ಷಗಳಿಂದ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದ ಅವರು ಕಳೆದ 6 ತಿಂಗಳಿನಿಂದ ಬೆಳ್ತಂಗಡಿ ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಭಾನುವಾರ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಮೂಡಬಿದಿರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅಲ್ಲಿಂದ ಸೋಮವಾರ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.ಪಿತ್ತಕೋಶದಲ್ಲಿ ಕಲ್ಲಿನ ಸಮಸ್ಯೆಯಿಂದಾಗಿ ಅವರು ಏರುಪೇರಾಗಿತ್ತು ಎನ್ನಲಾಗಿದೆ.
ಪುದುವೆಟ್ಟು ನಿವಾಸಿಯಾದ ಭುವನೇಂದ್ರ ಅವರು ಪತ್ನಿ ಇಬ್ಬರು ಮಕ್ಕಳು ಸೇರಿದಂತೆ ಕುಟುಂಬಸ್ಥರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
- Advertisement -


