Monday, May 20, 2024
Homeಕರಾವಳಿ29ರಂದು ಬಂಟ್ವಾಳದಲ್ಲಿ ಬೃಹತ್ ಆರೋಗ್ಯ ಮೇಳ, ಉಚಿತ ಆರೋಗ್ಯ ತಪಾಸಣೆ

29ರಂದು ಬಂಟ್ವಾಳದಲ್ಲಿ ಬೃಹತ್ ಆರೋಗ್ಯ ಮೇಳ, ಉಚಿತ ಆರೋಗ್ಯ ತಪಾಸಣೆ

spot_img
- Advertisement -
- Advertisement -

ಬಂಟ್ವಾಳ: ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯೆನೆಪೊಯ ಆಯುರ್ವೇದಿಕ್ ಕಾಲೇಜು, ಕಡೇಶ್ವಾಲ್ಯ ಗ್ರಾಮ ಪಂಚಾಯತ್, ಯೆನೆಪೋಯ ಮೆಡಿಕಲ್ ಕಾಲೇಜು ಹಾಗೂ ವಿವಿಧ ಸಂಘಸಂಸ್ಥೆಗಳ ಸಹಕಾರದಲ್ಲಿ ಮೇ.29ರ ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಬಂಟ್ವಾಳ ತಾಲೂಕಿನ ಕಡೇಶ್ವಾಲ್ಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಬೃಹತ್ ಆರೋಗ್ಯ ಮೇಳ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.


ಸಾರ್ವಜನಿಕರ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಉಚಿತ ಸೇವೆ ದೊರೆಯಲಿದೆ.


ಈ ಕಾರ್ಯಕ್ರಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉದ್ಘಾಟಿಸುವರು.ಕಡೇಶ್ವಾಲ್ಯ ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ಶೆಟ್ಟಿಗಾರ್ ಅಧ್ಯಕ್ಷತೆ ವಹಿಸುವರು.


ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್, ತಾಲೂಕು ಆಡಳಿತಾಧಿಕಾರಿ ಎಚ್.ಆರ್.ನಾಯಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜಗದೀಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ, ಬಂಟ್ವಾಳ ತಹಶೀಲ್ದಾರ್ ಡಾ.ಸ್ಮಿತಾ ರಾಮ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ತಾಲೂಕು ಆರೋಗ್ಯಾಧಿಕಾರಿ ಡಾ.ಜಯಪ್ರಕಾಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.


ವಿಶೇಷ ಆಹ್ವಾನಿತರಾಗಿ ಜನಶಿಕ್ಷಣ ಟ್ರಸ್ಟ್ ನಿರ್ದೇಶಕ ಶೀನ ಶೆಟ್ಟಿ, ಕೃಷ್ಣಮೂಲ್ಯ, ಎಮ್.ಎಸ್. ಡಬ್ಲ್ಯೂ ವಿಭಾಗ ಮುಖ್ಯಸ್ಥ ಡಾ.ಮೊಹಮ್ಮದ್ ಗುತ್ತಿಗಾರು, ಕಡೇಶ್ವಾಲ್ಯ ಸರ್ಕಾರಿ ಪ್ರೌಢಶಾಲೆಯ ಕಾರ್ಯಾಧ್ಯಕ್ಷ ತಿರುಮಲೇಶ್ವರ ಭಟ್ ಭಾಗವಹಿಸುವರು.

- Advertisement -
spot_img

Latest News

error: Content is protected !!