ಧಾರವಾಡ : ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ. ಸ್ನೇಹಮಯಿ ಕೃಷ್ಣ ಪ್ರಕರಣದ ತನಿಖೆಯನ್ನು CBI ಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ವಜಾಗೊಳಿಸಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಸಿಎಂ ವಿರುದ್ಧದ ಮುಡಾ ಕೇಸ್ ತನಿಖೆ ಸಿಬಿಐಗೆ ನೀಡಲು ನಕಾರ ವ್ಯಕ್ತಪಡಿಸಿದ್ದು, ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ. ಲೋಕಾಯುಕ್ತ ತನಿಖೆ ತಾರತಮ್ಯಪೂರಿತ ಎಂಬುದಕ್ಕೆ ಆಧಾರಗಳಿಲ್ಲ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ಮುಡಾ ನಿವೇಶನ ಹಂಚಿಕೆ ಅಕ್ರಮದ ಪ್ರಕರಣದ ಪ್ರಾಸಿಕ್ಯೂಷನ್ ಮತ್ತು ಪೊಲೀಸ್ ತನಿಖೆಗೆ ರಾಜ್ಯಪಾಲರು ನೀಡಿದ್ದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ ಗೆ 2024ರ ಆ.19ರಂದು ತಕರಾರು ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ವಜಾಗೊಳಿಸಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ 2024ರ ಸೆ.24ರಂದು ಆದೇಶಿಸಿತ್ತು. ಈ ತೀರ್ಪಿನಲ್ಲಿ ಪ್ರಕರಣದ ತನಿಖೆ ನಡೆಯುವುದು ಅತ್ಯಗತ್ಯವಿದೆ ಎಂದು ಹೇಳಿತ್ತು.ಇದೀಗ ಸ್ನೇಹಮಯಿ ಕೃಷ್ಣ CBI ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇದೀಗ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ವಜಾಗೊಳಿಸಿದೆ.