Saturday, May 4, 2024
Homeಕರಾವಳಿಉಡುಪಿಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ; ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಬಿಗ್ ರಿಲೀಫ್

ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ; ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಬಿಗ್ ರಿಲೀಫ್

spot_img
- Advertisement -
- Advertisement -

ಬೆಂಗಳೂರು; ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯ ಬಿ ರಿಪೋರ್ಟ್ ಸ್ವೀಕರಿಸಿದೆ.

ಉಡುಪಿ ಪೊಲೀಸರು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲವೆಂದು ಬಿ ರಿಪೋರ್ಟ್‌ ಸಲ್ಲಿಕೆ ಮಾಡಿದ್ದರು.ಈ ಬಿ ರಿಪೋರ್ಟ್ ಸಲ್ಲಿಕೆಯನ್ನು ಪ್ರಶ್ನಿಸಿ ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಪಾಟೀಲ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​ ವಾದ-ಪ್ರತಿವಾದ ಆಲಿಸಿ ಇಂದು ಬಿ ರಿಪೋರ್ಟ್ ಅಂಗೀಕರಿಸಿದೆ.

ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ 2022ರ ಏಪ್ರಿಲ್ 12 ರಂದು ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಕಮೀಷನ್‌ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕೆಎಸ್​​ ಈಶ್ವರಪ್ಪ ಅವರ ವಿರುದ್ಧ ಆರೋಪ ಕೇಳಿಬಂದಿತ್ತು.

- Advertisement -
spot_img

Latest News

error: Content is protected !!