Sunday, June 14, 2026
Homeತಾಜಾ ಸುದ್ದಿಚೆಕ್ ಬೌನ್ಸ್ ಪ್ರಕರಣದಲ್ಲಿ ಸಿದ್ದಾರ್ಥ್ ಹೆಗ್ಡೆ ಪತ್ನಿ ಮಾಳವಿಕಾಗೆ ಬಿಗ್ ರಿಲೀಫ್

ಚೆಕ್ ಬೌನ್ಸ್ ಪ್ರಕರಣದಲ್ಲಿ ಸಿದ್ದಾರ್ಥ್ ಹೆಗ್ಡೆ ಪತ್ನಿ ಮಾಳವಿಕಾಗೆ ಬಿಗ್ ರಿಲೀಫ್

- Advertisement -
- Advertisement -

ಚಿಕ್ಕಮಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಕಾಫಿ ಡೇ ಸಿದ್ದಾರ್ಥ್ ಹೆಗ್ಡೆ ಪತ್ನಿ ಮಾಳವಿಕಾ ಅವರಿಗೆ ಸದ್ಯ ಬಿಗ್ ರಿಲೀಫ್ ಸಿಕ್ಕಿದೆ. ಇಂದು ಕೋರ್ಟ್ ಗೆ ಹಾಜರಾದ ಮಾಳವಿಕ‌ ಅವರಿಗೆ ಜಾಮೀನು ನೀಡಲಾಗಿದೆ.

ಕಾಫಿ ಬೆಳೆಗಾರರ ಕೋಟ್ಯಾಂತರ ರೂಪಾಯಿ ಸಾಲ ಉಳಿಸಿಕೊಂಡಿದ್ದ ಹಿನ್ನಲೆಯಲ್ಲಿ ಕಾಫಿ ಬೆಳೆಗಾರರು ಎಬಿಸಿ ಸಂಸ್ಥೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನಲೆಯಲ್ಲಿ ನ್ಯಾಯಾಲಯವು ಮಾಳವಿಕಾ ಸೇರಿದಂತೆ 8 ಮಂದಿಗೆ ನೋಟಿಸ್ ನೀಡಿತ್ತು.

ಆದರೆ ಕೋರ್ಟ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಮಾಳವಿಕಾಗೆ ಬಂಧನ ವಾರಂಟ್ ಹೊರಡಿಸಿದ್ದರು. ಇದೀಗ ಮಾಳವಿಕಾ ಅವರು ಮೂಡಿಗೆರೆ ಜೆಎಂಎಫ್ಸಿ ಕೋರ್ಟ್ ಗೆ ಹಾಜರಾಗಿದ್ದು, ಮಾಳವಿಕಾ ಸೇರಿದಂತೆ ಐವರಿಗೆ ಜಾಮೀನು ಮಂಜೂರು ಮಾಡಿದೆ.

ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಕಾಫಿ ಬೆಳೆಗಾರ ನಂದೀಶ್ ಕೆ ಎಂಬುವವರು ಚೆಕ್ ಬೌನ್ಸ್ ಪ್ರಕರಣವನ್ನು ದಾಖಲಿಸಿದ್ದರು. ಎಬಿಸಿ ಕಂಪನಿ 45 ಲಕ್ಷ ಹಣ ನೀಡಬೇಕು ಆದರೆ ಕೇವಲ 4 ಲಕ್ಷ ಮಾತ್ರ ನೀಡಿದೆ, ಉಳಿದ ಹಣವನ್ನು ಚೆಕ್ ನಲ್ಲಿ ನಮೂದಿಸಿಲ್ಲ, ಅವರು ನೀಡಿದ್ದ ಚೆಕ್ ಕೂಡ ಬೌನ್ಸ್ ಆಗಿದೆ ಎಂದು ನಂದೀಶ್ ತಿಳಿಸಿದ್ದಾರೆ.

- Advertisement -

Latest News

error: Content is protected !!