- Advertisement -
- Advertisement -
ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ನ್ಯಾಯಾಲಯ ವಿಧಿಸಿದ್ದಂತ ಶಿಕ್ಷೆಯ ಪ್ರಮಾಣವನ್ನು ಹೈಕೋರ್ಟ್ ಅಮಾನತ್ತಿನಲ್ಲಿಡಲು ಆದೇಶಿಸಿದೆ.
ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಣಿಕೆ ಪ್ರಕರಣ ಸಂಬಂಧ 7 ವರ್ಷ ಜೈಲು ಶಿಕ್ಷೆಯನ್ನು ಕೋರ್ಟ್ ವಿಧಿಸಿತ್ತು. ಈ ತೀರ್ಪು ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿಯನ್ನು ಸಲ್ಲಿಸಲಾಗಿತ್ತು.ಇಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠವು ಅರ್ಜಿಯ ವಿಚಾರಣೆ ನಡೆಸಿ, ಶಿಕ್ಷೆಯ ಪ್ರಮಾಣವನ್ನು ಅಮಾನತ್ತಿನಲ್ಲಿ ಇಡಲು ಆದೇಶಿಸಿದೆ. ಅಲ್ಲದೇ 6 ವಾರಗಳಲ್ಲಿ ದಂಡದ ಮೊತ್ತದಲ್ಲಿ ಶೇ.25ರಷ್ಟು ಕೋರ್ಟ್ ಗೆ ಠೇವಣಿ ಇಡೋದಕ್ಕೆ ಸೂಚಿಸಿದೆ.
ಹೈಕೋರ್ಟ್ ನ ಈ ಆದೇಶಸಿಂದ ಶಾಸಕ ಸತೀಶ್ ಸೈಲ್ ಹಾಗೂ ಇತರೆ ಆರೋಪಿಗಳಿಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ. ಅಲ್ಲದೇ ಜೈಲುಪಾಲಾಗಿರುವಂತ ಆರೋಪಿಗಳು ನಾಳೆ ಬಿಡುಗಡೆಯಾಗುವ ಸಾಧ್ಯತೆ ಇದೆ.
- Advertisement -