Friday, April 11, 2025
Homeಅಪರಾಧವಿಟ್ಲ: ಕಾಲೇಜು ವಿದ್ಯಾರ್ಥಿನಿ ನಿಗೂಢ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮಾಣಿಲದ ಯುವಕನ ಕೈವಾಡ

ವಿಟ್ಲ: ಕಾಲೇಜು ವಿದ್ಯಾರ್ಥಿನಿ ನಿಗೂಢ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮಾಣಿಲದ ಯುವಕನ ಕೈವಾಡ

spot_img
- Advertisement -
- Advertisement -

ವಿಟ್ಲ: ಕಾಲೇಜಿಗೆಂದು ತೆರಳಿದ ವಿದ್ಯಾರ್ಥಿನಿ ಮನೆಗೆ ಬಾರದೆ ನಿಗೂಢ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಕು.ಅಕ್ಷತಾ(20) ನಾಪತ್ತೆಯಾದ ವಿದ್ಯಾರ್ಥಿನಿ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಅಕ್ಷತಾ ಕೊಲ್ನಾಡು ಗ್ರಾಮದ ಸೆರ್ಕಳ ಎಂಬಲ್ಲಿ ತನ್ನ ಚಿಕ್ಕಮ್ಮನ ಜೊತೆ ವಾಸವಿದ್ದು, ಆಕೆ ಜೂ.17 ರಂದು ಎಂದಿನಂತೆ ಬೆಳಗ್ಗೆ ಮನೆಯಿಂದ ಕಾಲೇಜಿಗೆ ತೆರಳಿದ್ದು, ಸಂಜೆ 5 ಗಂಟೆಯಾದರೂ ಮನೆಗೆ ಬಾರದೆ ಇದ್ದು ಮನೆಯವರು ಆಕೆಗೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ನೆರೆಮನೆ, ಸಂಬಂಧಿಕರಲ್ಲಿ ವಿಚಾರಿಸಿದಾಗ ಅಲ್ಲಿಯೂ ಆಕೆ ಇರದಿರುವುದು ಖಚಿತವಾದಾಗ ಗಾಬರಿಗೊಂಡ ಅಕ್ಷತಾಳ ಚಿಕಮ್ಮ ಅಕ್ಷತಾಳ ಪತ್ತೆಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.


ಅಕ್ಷತಾಳ ಚಿಕಮ್ಮ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ವಿಟ್ಲದ ಮಾಣಿಲದ ಯುವಕನೋರ್ವನ ಕರಿನೆರಳು ಇದೆ ಎಂಬ ಆರೋಪ ಕೇಳಿಬಂದಿದೆ. ಬೆಳಗ್ಗೆ ನಾರ್ಶಾ ಕ್ರಾಸ್ ಬಳಿಯಿಂದ ಮಾಣಿಲದ ಯುವಕ ಅಕ್ಷತಾ ಅವಳನ್ನು ಕರೆದುಕೊಂಡು ಹೋಗಿದ್ದಾನೆ. ನಂತರ ಉಪ್ಪಿನಂಗಡಿಯಲ್ಲಿ ಬಿಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.


ದೂರು ದಾಖಲಾಗುತ್ತಿದ್ದಂತೆ ವಿಟ್ಲ ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಾರ್ಶಾ ಕ್ರಾಸ್ ಬಳಿ ಯುವತಿಯನ್ನು ಯುವಕನೋರ್ವ ವಾಹನದಲ್ಲಿ ಕರೆದುಕೊಂಡು ಹೋಗಿರುವುದು ತಿಳಿದುಬಂದಿದ್ದು ನಂತರ ಉಪ್ಪಿನಂಗಡಿಯಲ್ಲಿ ಬಿಟ್ಟಿದ್ದಾನೆ. ಪೊಲೀಸರು ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿದ್ದಾರೆ.

- Advertisement -
spot_img

Latest News

error: Content is protected !!