Wednesday, June 3, 2026
Homeತಾಜಾ ಸುದ್ದಿಬಿಗ್ ಬಾಸ್ ಸ್ಪರ್ಧಿ, ಸ್ಯಾಂಡಲ್ ವುಡ್ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆಗೆ ಶರಣು

ಬಿಗ್ ಬಾಸ್ ಸ್ಪರ್ಧಿ, ಸ್ಯಾಂಡಲ್ ವುಡ್ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆಗೆ ಶರಣು

- Advertisement -
- Advertisement -

ಬೆಂಗಳೂರು:  ಸ್ಯಾಂಡಲ್ ವುಡ್ ನಟಿ, ಬಿಗ್ ಬಾಸ್ ಸ್ಪರ್ಧಿ ಜಯಶ್ರೀ ರಾಮಯ್ಯ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆಯ ಪ್ರಗತಿ ಲೇ ಔಟ್ ನಲ್ಲಿರುವ ಸಂಧ್ಯಾ ಕಿರಣ ಆಶ್ರಮದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಳೆದ ವರ್ಷ ಜುಲೈ ನಲ್ಲಿ  ಜಯಶ್ರೀ ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದರು. ಬಳಿಕ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿತ್ತು. ಇದೀಗ ಅವರು ಆತ್ಮಹತ್ಯೆ ಶರಣಾಗಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲೂ ಸಾವಿನ ಬಗ್ಗೆ ಮಾತನಾಡಿದ್ದ ನಟಿ ಜಯಶ್ರೀ 7 ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಹೇಳಿಕೊಂಡಿದ್ದರು. ಮಾತ್ರವಲ್ಲದೇ 5 ವರ್ಷ ವಯಸ್ಸಿನಲ್ಲೇ ನನ್ನ ಮೇಲೆ ದೌರ್ಜನ್ಯ ನಡೆಸಲಾಗಿತ್ತು. ನನ್ನ ಮೇಲೆ ಹುಡುಗಿಯರೂ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ. ನನಗೆ ದಯಾಮರಣ ಬೇಕು ಎಂದೆಲ್ಲ ಕೇಳಿಕೊಂಡಿದ್ದರು. ಇದೀಗ ನಿನ್ನೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಮಾರನಾಯಕನ ಹಳ್ಳಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಆತ್ಮಹತ್ಯಗೆ ಕಾರಣವನ್ನ ಕಲೆಹಾಕುತ್ತಿದ್ದಾರೆ. ಇನ್ನು ಮಾನಸಿಕ ಖಿನ್ನತೆಯಿಂದ ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತ ನಟಿ ಜಯಶ್ರೀ ಕನ್ನಡ ಗೊತ್ತಿಲ್ಲ, ಉಪ್ಪು ಹುಳಿ ಖಾರ ಚಿತ್ರದಲ್ಲಿ ನಟಿಸಿದ್ದಾರೆ. ಅಲ್ಲದೇ ಕನ್ನಡ ಬಿಗ್​ ಬಾಸ್​ಶೋನಲ್ಲೂ ಸ್ಪರ್ಧಿಯಾಗಿದ್ದರು.

- Advertisement -

Latest News

error: Content is protected !!