Saturday, June 28, 2025
Homeತಾಜಾ ಸುದ್ದಿಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಆರೆಸ್ಟ್: ಕುತ್ತಿಗೆಗೆ ಹುಲಿ ಉಗುರಿನ ಪೆಂಡೆಂಟ್ ಹಾಕಿದ್ದ ವರ್ತೂರು...

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಆರೆಸ್ಟ್: ಕುತ್ತಿಗೆಗೆ ಹುಲಿ ಉಗುರಿನ ಪೆಂಡೆಂಟ್ ಹಾಕಿದ್ದ ವರ್ತೂರು ಸಂತೋಷ್

spot_img
- Advertisement -
- Advertisement -

ಕನ್ನಡ ಕಿರುತೆರೆಯ ಪ್ರಸಿದ್ಧ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10ನೇ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಅವರನ್ನು ಬಿಗ್ ಬಾಸ್ ಮನೆಯಿಂದಲೇ ಅರೆಸ್ಟ್ ಮಾಡಲಾಗಿದೆ.

ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿಯನ್ನು ಅರೆಸ್ಟ್ ಮಾಡಲಾಗಿದ್ದು, ಅವರನ್ನು ಹುಲಿ ಉಗುರು ಇರುವ ಪೆಂಡೆಂಟ್ ಧರಿಸಿದ್ದ ಆರೋಪದ ಮೇಲೆ ಬಂಧಿಸಲಾಗಿದೆ.

ವೈಲ್ಡ್ ಲೈಫ್ ಪ್ರೊಟೆಕ್ಷನ್ ಅಕ್ಸ್ ಅಡಿಯಲ್ಲಿ ವರ್ತೂರು ಸಂತೋಷ್ ಅವರನ್ನು ರಾಮೋಹಳ್ಳಿ ಅರಣ್ಯಾಧಿಕಾರಿಗಳು ಬಂಧಿಸಿದ್ದು, ಸದ್ಯ ರಾಮೋಹಳ್ಳಿ ಅರಣ್ಯಾಧಿಕಾರಿಗಳ ಕಸ್ಟಡಿಯಲ್ಲಿದ್ದಾರೆ.

ಬಂಧಿತ ಸಂತೋಷ್ ಅವರನ್ನು ಕಗ್ಗಲಿಪುರ ಅರಣ್ಯ ಇಲಾಖೆ ಕಚೇರಿಯಲ್ಲಿಟ್ಟು ವಿಚಾರಿಸಲಾಗುತ್ತಿದ್ದು, ಕುತ್ತಿಗೆಯಲ್ಲಿ ಹುಲಿಯ ಉಗುರಿರುವ ಪೆಂಡೆಂಟ್ ಧರಿಸಿರುವ ಕುರಿತು ಎಫ್‌ಐಆರ್ ದಾಖಲಾಗಿತ್ತು. ಟಿವಿಯಲ್ಲಿ ಹುಲಿ ಉಗುರು ಪೆಂಡೆಂಟ್ ಹಾಕಿಕೊಂಡ ವಿಡಿಯೋ ಕೇಸ್ ಹಾಕಲಾಗಿದೆ. ಈ ಹಿನ್ನೆಲೆ ವರ್ತೂರು ಸಂತೋಷ್ ನನ್ನ ಬಂಧಿಸಿರುವ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!