Friday, June 5, 2026
Homeಕರಾವಳಿಕಡಬ: ಬೈಕ್ ಗಳ ಮುಖಾಮುಖಿ ಡಿಕ್ಕಿ, ಗಂಭೀರ ಗಾಯಗೊಂಡಿದ್ದ ಸವಾರನೋರ್ವ ಆಸ್ಪತ್ರೆಯಲ್ಲಿ ಸಾವು

ಕಡಬ: ಬೈಕ್ ಗಳ ಮುಖಾಮುಖಿ ಡಿಕ್ಕಿ, ಗಂಭೀರ ಗಾಯಗೊಂಡಿದ್ದ ಸವಾರನೋರ್ವ ಆಸ್ಪತ್ರೆಯಲ್ಲಿ ಸಾವು

- Advertisement -
- Advertisement -

ಕಡಬ: ನಿನ್ನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ  ಗಂಭೀರ ಗಾಯಗೊಂಡಿದ್ದ ಸವಾರನೋರ್ವ ಚಿಕಿತ್ಸೆಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳದ ಕೋಡಂದೂರು ಎಂಬಲ್ಲಿ ನಿನ್ನೆ ಬೆಳಿಗ್ಗೆ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿತ್ತು.ಇದರಲ್ಲಿ ಗಂಭೀರಗಾಯಗೊಂಡಿದ್ದ ಕಡಬ ತಾಲೂಕು ಬಂಟ್ರ ಗ್ರಾಮದ ಪಣೆಬೈಲು ನಿವಾಸಿ ಯತೀಂದ್ರ ರೈ ಎಂಬವರ ಪುತ್ರ ಪ್ರಮೋದ್ ರೈ ಎಂಬವರನ್ನು ಹೆಚ್ಚಿನ ಚಿಕಿತ್ಸೆಗಾಗಿಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಾಳು ಪ್ರಮೋದ್ ರವರು ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದುತಿಳಿದುಬಂದಿದೆ.

- Advertisement -

Latest News

error: Content is protected !!