Wednesday, June 3, 2026
Homeಕರಾವಳಿಉಜಿರೆ: ಬೈಕ್ ಢಿಕ್ಕಿಯಾಗಿ ಪಾದಚಾರಿ ಸಾವು

ಉಜಿರೆ: ಬೈಕ್ ಢಿಕ್ಕಿಯಾಗಿ ಪಾದಚಾರಿ ಸಾವು

- Advertisement -
- Advertisement -

ಬೆಳ್ತಂಗಡಿ: ರಸ್ತೆ ಅಪಘಾತದಲ್ಲಿ ಕೂಲಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಉಜಿರೆಯಲ್ಲಿ ನಡೆದಿದೆ. ಶಿರಹಟ್ಟಿ ತಾಲೂಕು ನಿವಾಸಿ ಪ್ರಸ್ತುತ ನಿಡಿಗಲ್‌ನಲ್ಲಿ ವಾಸವಿದ್ದ ಬೀರೇಶ್ ಅಲಿಯಾಸ್ ಫಕೀರಪ್ಪ(48) ಮೃತಪಟ್ಟ ವ್ಯಕ್ತಿ

ಉಜಿರೆಯಲ್ಲಿ ವಾಹನಕ್ಕಾಗಿ ಕಾಯುತ್ತಿದ್ದ ವೇಳೆ ಇಂದಬೆಟ್ಟು ನಿವಾಸಿ ಕಾರ್ತಿಕ್(22) ಎಂಬಾತ ಬೈಕ್‌ನಲ್ಲಿ ಬೆಳ್ತಂಗಡಿಯಿಂದ ಚಾರ್ಮಾಡಿ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಉಜಿರೆ ಪೇಟೆಯಲ್ಲಿ ಬೈಕ್ ಢಿಕ್ಕಿ ಹೊಡೆದಿದೆ.

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಿಂದ ಮಂಗಳೂರು ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಕಾರ್ತಿಕ್ ಅವರಿಗೂ ಗಂಭೀರ ಗಾಯವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!