Saturday, June 6, 2026
Homeಕರಾವಳಿಉಳ್ಳಾಲ: ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಉಳ್ಳಾಲ: ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲಿಯೇ ಸಾವು

- Advertisement -
- Advertisement -

ಮಂಗಳೂರು: ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚೆಂಬುಗುಡ್ಡೆ ಬಳಿ ಇಂದು ನಸುಕಿನ ಜಾವ ನಡೆದಿದೆ.

ಸಂತೋಷನಗರ ನಿವಾಸಿ ಸಂದೇಶ್ ಕೆರೆಬೈಲ್ (38) ಸಾವನ್ನಪ್ಪಿದವರು. ಸುಮಾರು 3 ಗಂಟೆಯ ವೇಳೆ ಈ ಅಪಘಾತ ನಡೆದಿದ್ದು, ಸಂದೇಶ್ ಅವರು ಕೊಲ್ಯ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಮನೆಗೆ ವಾಪಸ್ಸಾಗುತ್ತಿದ್ದರು.ಅಪಘಾತದ ಪರಿಣಾಮ ಸಂದೇಶ್ ರಸ್ತೆಗುರುಳಿ ಬಿದ್ದಿದ್ದು, ತಲೆಗೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳೂರಿನ ನಾಗುರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ಅವಿವಾಹಿತರಾಗಿದ್ದು ಸಹೋದರಿ ಹಾಗೂ ತಾಯಿಯನ್ನು ಅಗಲಿದ್ದಾರೆ. ಪೈಂಟರ್ ಆಗಿ ದುಡಿಯುತ್ತಿದ್ದ ಸಂದೇಶ್, ಕೋವಿಡ್ ಲಾಕ್ ಡೌನ್ ನಂತರ ಕೊಲ್ಯ ಸಮೀಪ ಮೀನು ಮಾರಾಟ ನಡೆಸುತ್ತಿದ್ದರು.

- Advertisement -

Latest News

error: Content is protected !!