Friday, June 5, 2026
Homeಕರಾವಳಿಕಾಸರಗೋಡುಕಾಸರಗೋಡು: ಬೈಕ್ ಮಗುಚಿ ಬಿದ್ದು ಸವಾರ ಸಾವು

ಕಾಸರಗೋಡು: ಬೈಕ್ ಮಗುಚಿ ಬಿದ್ದು ಸವಾರ ಸಾವು

- Advertisement -
- Advertisement -

ಕಾಸರಗೋಡು: ಬೈಕ್ ಮಗುಚಿ ಬಿದ್ದು ಸವಾರ ಮೃತಪಟ್ಟ ಘಟನೆ ಕುಂಬಳೆ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಆರಿಕ್ಕಾಡಿ ಬಳಿ ನಡೆದಿದೆ. ಸಹ ಸವಾರ ಗಂಭೀರ ಗಾಯಗೊಂಡಿದ್ದಾರೆ. ಮೃತರನ್ನು ಕುಂಬಳೆ ಕೊಯಿಪಾಡಿ ಕಡಪ್ಪುರದ ಮುಹಮ್ಮದ್ ಹನೀಫ್ (45) ಎಂದು ತಿಳಿಸಲಾಗಿದೆ.

ಸಹ ಸವಾರರಾಗಿದ್ದ ಸಿರಾಜ್ ಗಂಭೀರ ಗಾಯಗೊಂಡಿದ್ದು, ಕಾಸರಗೋಡು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಲ್ಲಿ ಸಂಬಂಧಿಕರೋರ್ವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಈ ವೇಳೆ ಹನೀಫ್ ಮೃತಪಟ್ಟರು. ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!