Wednesday, July 15, 2026
Homeಕರಾವಳಿಮಂಗಳೂರು: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು

ಮಂಗಳೂರು: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು

- Advertisement -
- Advertisement -

ಮಂಗಳೂರು;ಬೈಕ್ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಕಾಸರಗೋಡಿನ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ನಾರಂಪಾಡಿ ನೆಡುವಂಗಡಿಯ ಮಿಥುನ್ ರಾಜ್ (16) ಮೃತಪಟ್ಟ ವಿದ್ಯಾರ್ಥಿ.

ಮಿಥುನ್ ಪಿಯುಸಿ ವಿದ್ಯಾರ್ಥಿಯಾಗಿದ್ದನು. ಸೆ.8 ರಂದು ಕಾಸರಗೋಡಿನಿಂದ ನಾರಂಪಾಡಿಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಕೊಲ್ಲಂಗಾನ ದಲ್ಲಿ ಬೈಕ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದ. ಮಿಥುನ್ ರಾಜ್ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ. ತಕ್ಷಣ ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಈ ಬಗ್ಗೆ ಬದಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!