Wednesday, June 3, 2026
Homeಕರಾವಳಿಮಂಗಳೂರುಸುಳ್ಯ; ಕಲ್ಲುಗುಂಡಿಯಲ್ಲಿ ಬೈಕ್ ಡಿಕ್ಕಿ ಹೊಡೆದು ಮಹಿಳೆ ಸಾವು

ಸುಳ್ಯ; ಕಲ್ಲುಗುಂಡಿಯಲ್ಲಿ ಬೈಕ್ ಡಿಕ್ಕಿ ಹೊಡೆದು ಮಹಿಳೆ ಸಾವು

- Advertisement -
- Advertisement -

ಸುಳ್ಯ; ಬೈಕ್ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿರುವ ಘಟನೆ ಕಲ್ಲುಗುಂಡಿ ಪೋಸ್ಟ್ ಆಫೀಸ್ ಬಳಿ ನಡೆದಿದೆ.


ಸಂಪಾಜೆ ಬೈಲು ನಿವಾಸಿ ಕೊ. ಸಂಪಾಜೆ ಗ್ರಾ.ಪಂ. ಮಾಜಿ ಅಧ್ಯಕ್ಷ ಕುಮಾರ್ ಚೆದ್ಕಾರ್‌ ಅವರ ತಾಯಿ ಕಮಲ ಚೆದ್ಕಾರ್ (67) ಮೃತ ದುರ್ದೈವಿ.

ಕಮಲ ಅವರು ಕಲ್ಲುಗುಂಡಿಯ ಅಂಚೆ ಕಚೇರಿಯ ಬಳಿ ಬಸ್ ತಂಗುದಾಣದಿಂದ ಸಂಪಾಜೆ ಕಡೆ ಹೋಗುವ ಬಸ್ ಹತ್ತಲು ರಸ್ತೆ ದಾಟುತ್ತಿದ್ದಾಗ, ಅದೇ ಮಾರ್ಗವಾಗಿ ಸುಳ್ಯಕ್ಕೆ ಬರುತ್ತಿದ್ದ ಕೇರಳ ಮೂಲದ ಬೈಕ್ ನಿಯಂತ್ರಣ ತಪ್ಪಿ ಅವರಿಗೆ ಡಿಕ್ಕಿ ಹೊಡೆಯಿತು. ಪರಿಣಾಮವಾಗಿ ಮಹಿಳೆಗೆ ಗಂಭೀರ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!