Friday, April 26, 2024
Homeಕರಾವಳಿಕಡಬದಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ದ್ವಿಚಕ್ರ ವಾಹನ: ಬೈಕ್ ಸವಾರ ಸ್ಥಳದಲ್ಲೇ ಸಾವು

ಕಡಬದಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ದ್ವಿಚಕ್ರ ವಾಹನ: ಬೈಕ್ ಸವಾರ ಸ್ಥಳದಲ್ಲೇ ಸಾವು

spot_img
- Advertisement -
- Advertisement -

ಕಡಬ : ಸವಾರನ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನವೊಂದು ರಸ್ತೆ ಬದಿಯ ಚರಂಡಿಗೆ ಉರುಳಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೊಯಿಲ ಎಂಬಲ್ಲಿ ನಡೆದಿದೆ.

ಕಡಬ ತಾಲೂಕಿನ ನೆಕ್ಕಿತ್ತಡ್ಕ ನಿವಾಸಿ ಅಬ್ಬಾಸ್ ಎಂಬವರ ಪುತ್ರ ಖಲೀಲ್ ಮೃತ ಬೈಕ್ ಸವಾರ.

ಖಲೀಲ್ ಅವರು ತನ್ನ ಸ್ನೇಹಿತನ ದ್ವಿಚಕ್ರ ವಾಹನದಲ್ಲಿ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದಾಗ ಕೊಯಿಲ ಎಂಬಲ್ಲಿ ಚರಂಡಿಗೆ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -
spot_img

Latest News

error: Content is protected !!