Friday, June 5, 2026
Homeಕರಾವಳಿವಿಟ್ಲದಲ್ಲಿ ಭೀಕರ ರಸ್ತೆ ಅವಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ವಿಟ್ಲದಲ್ಲಿ ಭೀಕರ ರಸ್ತೆ ಅವಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -

ವಿಟ್ಲ:  ಬೈಕ್ ಹಾಗೂ ಬೊಲೆರೋ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಕಾಶಿಮಠ ಎಂಬಲ್ಲಿ ಇಂದು ನಡೆದಿದೆ.

ಮೃತ ಸವಾರನನ್ನು ಮಾಣಿ ಸಮೀಪದ ಬರಿಮಾರು ನಿವಾಸಿ ಬಾಲಕೃಷ್ಣ(55) ಎಂದು ಗುರುತಿಸಲಾಗಿದೆ. ವಿಟ್ಲದಿಂದ ಉಕ್ಕುಡ ಕಡೆಗೆ ತೆರಳುತ್ತಿದ್ದ ಬೈಕಿಗೆ ಹಿಂದಿನಿಂದ ಬೊಲೆರೋ ಢಿಕ್ಕಿ ಹೊಡೆದಿದ. ಈ ವೇಳೆ ರಸ್ತೆಗೆಸೆಯಲ್ಪಟ್ಟು ಬೈಕ್ ಸವಾರ ಬಾಲಕೃಷ್ಣ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ತಂಡ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಿಟ್ಲ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

- Advertisement -

Latest News

error: Content is protected !!