Saturday, June 6, 2026
Homeಕರಾವಳಿಉಜಿರೆಯಲ್ಲಿ ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿ: ಗಾಯಗೊಂಡಿದ್ದ ವ್ಯಕ್ತಿ ಸಾವು

ಉಜಿರೆಯಲ್ಲಿ ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿ: ಗಾಯಗೊಂಡಿದ್ದ ವ್ಯಕ್ತಿ ಸಾವು

- Advertisement -
- Advertisement -

ಬೆಳ್ತಂಗಡಿ: ನಿನ್ನೆ ರಾತ್ರಿ ಉಜಿರೆ- ಚಾರ್ಮಾಡಿ ರಸ್ತೆಯ ಎಸ್.ಆರ್  ಬಾರ್ ಏಂಡ್ ರೆಸ್ಟೋರೆಂಟ್ ಮುಂಭಾಗದಲ್ಲಿ ನಡೆದ ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ  ಕಲ್ಮಂಜ ಗ್ರಾಮದ ನಿಡಿಗಲ್ ನಿವಾಸಿ ಶಿವಶಂಕರ್ ಕಾಮತ್(52ವ.) ಅವರು ಸಾವನ್ನಪ್ಪಿದ್ದಾರೆ.

ನಿನ್ನೆ ರಸ್ತೆ ಬದಿ ತನ್ನ ವಾಹನ ನಿಲ್ಲಿಸಿದ ಅವರು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಆಕ್ಟಿವಾ ಗಾಡಿಯೊಂದು ಶಿವಶಂಕರ್ ಅವರಿಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಅವರು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರಿಗೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ,  ಮಂಗಳೂರಿನ  ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆ ಅವರು ಸಾವನ್ನಪ್ಪದಿದ್ದಾರೆ. ಇನ್ನು  ಘಟನೆಯಲ್ಲಿ ಸ್ಕೂಟರ್ ಸವಾರನಿಗೂ ಗಾಯಗಳಾಗಿದ್ದು ಚಿಕಿತ್ಸೆ ಪಡೆಯತ್ತಿದ್ದಾರೆ.

ಮೃತ ಶಂಕರ್‌ ಕಾಮತ್ ಅವರು ಉಜಿರೆಯ ಸಂಧ್ಯಾ ಟ್ರೇಡರ್ಸ್ ಸಂಸ್ಥೆಯ ಸಿಬ್ಬಂದಿಯಾಗಿದ್ದು,  ತಂದೆ, ತಾಯಿ ,ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

- Advertisement -

Latest News

error: Content is protected !!