Thursday, June 4, 2026
Homeಕರಾವಳಿಬೆಳ್ತಂಗಡಿ; ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಬೆಳ್ತಂಗಡಿ; ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

- Advertisement -
- Advertisement -

ಬೆಳ್ತಂಗಡಿ; ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ  ನಾರಾವಿ ಅರಸಿಕಟ್ಟೆ ಎಂಬಲ್ಲಿ ನಡೆದಿದೆ.

ನಾರಾವಿ ಗ್ರಾಮದ ಅರಸಿಕಟ್ಟೆ ನಿವಾಸಿ ಸಂತೋಷ್ (23) ಮೃತ ದುರ್ದೈವಿ. ನಿನ್ನೆ ರಾತ್ರಿ ಮನೆ ಸಮೀಪದ ಅಂಗಡಿಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸವಾರನ ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಇವರನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!