Thursday, June 4, 2026
Homeಅಪರಾಧಸುಳ್ಯದ ಪೆರಾಜೆಯ ಕುಂಬಳಚೇರಿಯಲ್ಲಿ ಬೈಕ್ ಅಪಘಾತ : ವಿದ್ಯಾರ್ಥಿ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ಸುಳ್ಯದ ಪೆರಾಜೆಯ ಕುಂಬಳಚೇರಿಯಲ್ಲಿ ಬೈಕ್ ಅಪಘಾತ : ವಿದ್ಯಾರ್ಥಿ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

- Advertisement -
- Advertisement -

ಸುಳ್ಯ:  ಇಲ್ಲಿನ ಪೆರಾಜೆಯ ಕುಂಬಳಚೇರಿ ಎಂಬಲ್ಲಿ ಬೈಕ್ ಹಾಗೂ ಜೀಪು ಮಧ್ಯೆ ಅಪಘಾತ ಸಂಭವಿಸಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಪೆರಾಜೆಯ ಲೋಕನಾಥ ಕುಂದಲ್ಪಾಡಿ ಎಂಬವರ ಮಗ ವಿಶ್ವದೀಪ್ ಮೃತ ವಿದ್ಯಾರ್ಥಿ. ಪೆರಾಜೆ ಆರ್ .ಡಿ. ವೆಂಕಪ್ಪ ಎಂಬವರ ಪುತ್ರ ದರ್ಶನ್ ಹಾಗೂ ಪೆರಾಜೆಯ ಲೋಕನಾಥ ಕುಂದಲ್ಪಾಡಿ ಎಂಬವರ ಮಗ ವಿಶ್ವದೀಪ್ ಸುಳ್ಯದ ಸೈಂಟ್ ಜೋಸೆಫ್ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾಗಿದ್ದು, ಇಂದು ಪರೀಕ್ಷೆ ಮುಗಿಸಿ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಕುಂಬಳಚೇರಿಯ ಗಡಿ ಗುಡ್ಡೆ ಎಂಬಲ್ಲಿ ಎದುರಿನಿಂದ ಬಂದ ಜಿಪ್ ಡಿಕ್ಕಿಯಾಗುವುದನ್ನು ತಪ್ಪಿಸಲು ಬ್ರೇಕ್ ಹಾಕಿದ್ದಾರೆ. ಆಗ ಬೈಕ್ ನಿಯಂತ್ರಣ ತಪ್ಪಿ ಜೀಪ್ ಗೆ ಗುದ್ದಿದೆ. ಬೈಕ್ ನಿಂದ ರೋಡ್ ಗೆ ಎಸೆಯಲ್ಪಟ್ಟ ವಿಶ್ವದೀಪ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ದರ್ಶನ್ ಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ.

ಇನ್ನು ಮೃತ ವಿಶ್ವದೀಪ್ ಪ್ರತಿಭಾವಂವ ವಿದ್ಯಾರ್ಥಿಯಾಗಿದ್ದ ಎನ್ನಲಾಗಿದೆ.

- Advertisement -

Latest News

error: Content is protected !!