Thursday, June 4, 2026
Homeಕರಾವಳಿಬೆಳ್ತಂಗಡಿ : ಕೊಕ್ರಾಡಿ ಪಿಕಪ್ ಬೈಕ್  ಡಿಕ್ಕಿ ವಿದ್ಯಾರ್ಥಿ ಸಾವು

ಬೆಳ್ತಂಗಡಿ : ಕೊಕ್ರಾಡಿ ಪಿಕಪ್ ಬೈಕ್  ಡಿಕ್ಕಿ ವಿದ್ಯಾರ್ಥಿ ಸಾವು

- Advertisement -
- Advertisement -

ಬೆಳ್ತಂಗಡಿ: ಪಿಕಪ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಬಳಿ ಇಂದು ಬೆಳಿಗ್ಗೆ ನಡೆದಿದೆ.

ಮೂಡಬಿದಿರೆ ಕಾಲೇಜಿಗೆ ತೆರಳಲು ಮನೆಯಿಂದ ಒಂದು ಕಿ.ಮೀ ದೂರದ ಕುಂಟಲಕಟ್ಟೆ ಎಂಬಲ್ಲಿಯವರೆಗೆ ಬೈಕಿನಲ್ಲಿ ತೆರಳಿ ಅಲ್ಲಿಂದ ಬಸ್ಸಿನಲ್ಲಿ ಮೂಡಬಿದಿರೆ ಕಾಲೇಜಿಗೆ ತೆರಳುತ್ತಿರುವಾಗ ಕೊಲ್ಯಕಾರ್ ಎಂಬಲ್ಲಿ ಉಜ್ವಲ್ (19) ಎಂಬ ವಿದ್ಯಾರ್ಥಿಗೆ ಮೂಡಬಿದ್ರೆಯಿಂದ ಬೆಳ್ತಂಗಡಿ ಕಡೆಗೆ ಬರುತಿದ್ದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಬೈಕ್ ಸವಾರ ಬಿದ್ದು ಗಂಭೀರ ಗಾಯಗೊಂಡಿದ್ದು ತಕ್ಷಣ ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಆವಾಗಲೇ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!