Sunday, June 7, 2026
Homeಅಪರಾಧಪ್ರೇಯಸಿಯನ್ನು ಕೂರಿಸಿಕೊಂಡು ದುಬಾರಿ ಬೈಕ್ ನ ಅತೀ ವೇಗದ ಚಾಲನೆ: ಅಪಘಾತವಾಗಿ ನಿವೃತ್ತ ಪೊಲೀಸ್ ಅಧಿಕಾರಿಯ...

ಪ್ರೇಯಸಿಯನ್ನು ಕೂರಿಸಿಕೊಂಡು ದುಬಾರಿ ಬೈಕ್ ನ ಅತೀ ವೇಗದ ಚಾಲನೆ: ಅಪಘಾತವಾಗಿ ನಿವೃತ್ತ ಪೊಲೀಸ್ ಅಧಿಕಾರಿಯ ಪುತ್ರ ಹಾಗೂ ಆತನ ಗೆಳತಿ ಸಾವು

- Advertisement -
- Advertisement -

ಬೆಂಗಳೂರು: ಪ್ರೇಯಸಿಯನ್ನು ಕೂರಿಸಿಕೊಂಡು ದುಬಾರಿ ಡುಕಾಟಿ ಬೈಕ್ ನ ಅತೀ ವೇಗದಿಂದ ಚಾಲನೆ ಮಾಡಿ ಅಪಘಾತ ಸಂಭವಿಸಿ ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಆತನ ಪ್ರೇಯಸಿ ಸಾವನ್ನಪ್ಪಿರುವ ಘಟನೆ ಸರ್ಜಾಪುರ-ಬೆಂಗಳೂರು ಮುಖ್ಯರಸ್ತೆಯಲ್ಲಿ ನಡೆದಿದೆ.


ಪೊಲೀಸ್ ಅಧಿಕಾರಿ ಗುರುಪ್ರಸಾದ್ ಅವರ ಪುತ್ರ ಗಗನ್ ದೀಪ್ ಮತ್ತು ಬನಶಂಕರಿಯ ಯಶಸ್ವಿನಿ ಮೃತ ದುರ್ದೈವಿಗಳು. ಇವರಿಬ್ಬರೂ ಸರ್ಜಾಪುರದ ಪ್ರೆಸ್ಟೀಜ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಬೆಂಗಳೂರಿನಿಂದ ಸರ್ಜಾಪುರಕ್ಕೆ ಬೈಕ್ನಲ್ಲಿ ಬರುತ್ತಿದ್ದಾಗ ಮಾರ್ಗಮಧ್ಯೆ ರಸ್ತೆಬದಿಯ ಮರಕ್ಕೆ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!