Saturday, August 29, 2026
Homeತಾಜಾ ಸುದ್ದಿವಿಟ್ಲ: ಪಿಕಪ್ ಬೈಕಿಗೆ ಡಿಕ್ಕಿ, ಓರ್ವ ಸಾವು!

ವಿಟ್ಲ: ಪಿಕಪ್ ಬೈಕಿಗೆ ಡಿಕ್ಕಿ, ಓರ್ವ ಸಾವು!

- Advertisement -
- Advertisement -

ವಿಟ್ಲ: ಬೈಕ್ – ಪಿಕಪ್ ನಡುವೆ ಪರಸ್ಪರ ಡಿಕ್ಕಿಯಾದ ಪರಿಣಾಮ ಓರ್ವ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರು ಸಮೀಪದ ಸುರಿಬೈಲು ತಿರುವಿನಲ್ಲಿ ನಡೆದಿದೆ.

ತೊಕ್ಕೊಟ್ಟು ಮೂಲದ ದ್ವಿಚಕ್ರ ವಾಹನ ಸವಾರ ಸಂತೋಷ್‌ (35) ಮೃತ ಪಟ್ಟಿದ್ದಾರೆ. ಸಹ ಸವಾರ ರಂಜಿತ್‌ ಗಾಯಗೊಂಡಿದ್ದು ಅವರನ್ನು ಮಂಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲ್ಲಡ್ಕ ಕಡೆಯಿಂದ ಸಾಲೆತ್ತೂರು ಕಡೆಗೆ ಬರುತ್ತಿದ್ದ ಪಿಕ್‌ಅಪ್‌ ವಾಹನ, ಸಾಲೆತ್ತೂರು ಕಡೆಯಿಂದ ಕಲ್ಲಡ್ಕ ಕಡೆಗೆ ಹೋಗುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆದಿದ್ದು, ಸವಾರರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದರು.

ಬಂಟ್ವಾಳ ಸರಕಾರಿ ಆಸ್ವತ್ರೆಗೆ ಗಾಯಾಳುಗಳನ್ನು ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಸರಕಾರಿ ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತೋಷ್‌ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಘಟನೆ ಸಂಭವಿಸಿದ ಬಳಿಕ ಪಿಕಪ್ ಚಾಲಕ ಠಾಣೆಗೆ ಬಂದು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!