Wednesday, June 3, 2026
Homeಕರಾವಳಿಬಂಟ್ವಾಳ: ಆಟೋ ರಿಕ್ಷಾ ಕಾರು ಡಿಕ್ಕಿ: ವೃದ್ಧೆ ಸಾವು !

ಬಂಟ್ವಾಳ: ಆಟೋ ರಿಕ್ಷಾ ಕಾರು ಡಿಕ್ಕಿ: ವೃದ್ಧೆ ಸಾವು !

- Advertisement -
- Advertisement -

ಬಂಟ್ವಾಳ: ಇಲ್ಲಿನ ಅಮ್ಟೂರು ಸಮೀಪದ ಸುಬ್ಬಕೋಡಿ ಎಂಬಲ್ಲಿ ಆಟೋ ರಿಕ್ಷಾ ಕಾರು ಡಿಕ್ಕಿಯಾಗಿ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಕಲ್ಲಡ್ಕದ ಮುರಬೈಲ್ ನಿವಾಸಿ ದೇವಕಿ (70) ಎಂದು ಗುರುತಿಸಲಾಗಿದೆ. ಡಿಕ್ಕಿಯ ರಭಸಕ್ಕೆ ದೇವಕಿ ಆಟೋ ರಿಕ್ಷಾದಿಂದ ಹಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಅಪಘಾತದಲ್ಲಿ ಆಟೋ ಚಾಲಕ ಭೋಜ ಮೂಲ್ಯ ಗಾಯಗೊಂಡಿದ್ದಾರೆ. ಎರಡೂ ವಾಹನಗಳಿಗೆ ಹಾನಿಯಾಗಿದೆ ಆದರೆ ಕಾರಿನಲ್ಲಿದ್ದವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!