Monday, June 8, 2026
Homeಕರಾವಳಿಉಡುಪಿರಸ್ತೆ ದಾಟುತ್ತಿದ್ದ ದಂಪತಿಗೆ ಬೈಕ್‌ ಡಿಕ್ಕಿ; ಪತ್ನಿ ಸಾವು, ಪತಿ ಆಸ್ಪತ್ರೆಗೆ ದಾಖಲು

ರಸ್ತೆ ದಾಟುತ್ತಿದ್ದ ದಂಪತಿಗೆ ಬೈಕ್‌ ಡಿಕ್ಕಿ; ಪತ್ನಿ ಸಾವು, ಪತಿ ಆಸ್ಪತ್ರೆಗೆ ದಾಖಲು

- Advertisement -
- Advertisement -

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳ ಪೆಟ್ರೋಲ್ ಪಂಪ್ ಬಳಿಯಲ್ಲಿ ಸಂಬಂಧಿಕರ ಮನೆ ಮೆಹೆಂದಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ರಸ್ತೆ ದಾಟುತ್ತಿದ್ದ ದಂಪತಿಗೆ ಬೈಕ್‌ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಅಪಘಾತದಲ್ಲಿ ಪತ್ನಿ ವಿಜಯ ಶೆಟ್ಟಿ (61)  ಸಾವನ್ನಪ್ಪಿದ್ದರೆ, ಪತಿ ಪಾಂಗಾಳ ಸಾದಾದಿ ಪಡುಮನೆ ಶೇಖರ್ ಶೆಟ್ಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇನ್ನು ಡಿಕ್ಕಿಯಾದ ರಭಸಕ್ಕೆ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಸ್ಥಳೀಯರು ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದ್ಯೊಯ್ದಿದ್ದಾರೆ. ಆದರೆ ವಿಜಯ ಶೆಟ್ಟಿ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಶೇಖರ್ ಶೆಟ್ಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಜಯಾ ಅವರು ಪತಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

- Advertisement -

Latest News

error: Content is protected !!