Wednesday, June 26, 2024
Homeತಾಜಾ ಸುದ್ದಿಹಳೆಯಂಗಡಿ: ಡಿವೈಡರ್ ಗೆ ಬೈಕ್ ಢಿಕ್ಕಿ- ಚಿಕಿತ್ಸೆ ಫಲಿಸದೆ ಯುವಕ ಸಾವು

ಹಳೆಯಂಗಡಿ: ಡಿವೈಡರ್ ಗೆ ಬೈಕ್ ಢಿಕ್ಕಿ- ಚಿಕಿತ್ಸೆ ಫಲಿಸದೆ ಯುವಕ ಸಾವು

spot_img
- Advertisement -
- Advertisement -

ಹಳೆಯಂಗಡಿ: ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ. ಮೃತ ಯುವಕನನ್ನು ಮೂಲ್ಕಿ ಚಿತ್ರಾಪು ನಿವಾಸಿ ಗಣೇಶ್ ದೇವಾಡಿಗ (25) ಎಂದು ತಿಳಿಸಲಾಗಿದೆ.

ಮೃತ ಗಣೇಶ್ ಸುರತ್ಕಲ್‌ ಎನ್‌ಐಟಿಕೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಎಂದಿನಂತೆ ಕೆಲಸಕ್ಕೆಂದು ಬೈಕ್ ನಲ್ಲಿ ತೆರಳುತ್ತಿದ್ದರು. ಆದರೆ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚರಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದಿತ್ತು. ಢಿಕ್ಕಿಯ ರಭಸಕ್ಕೆ ಆತನಿಗೆ ಗಂಭೀರ ಗಾಯಗಳಾದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾರೆ.

- Advertisement -
spot_img

Latest News

error: Content is protected !!