Thursday, June 25, 2026
Homeಕರಾವಳಿಮಂಗಳೂರುಮಂಗಳೂರು : ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ನುಗ್ಗಿದ ತ್ರಿಬಲ್ ರೈಡಿಂಗ್ ಬೈಕ್; ಡಿಕ್ಕಿ ಹೊಡೆದ ಕಾರು,...

ಮಂಗಳೂರು : ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ನುಗ್ಗಿದ ತ್ರಿಬಲ್ ರೈಡಿಂಗ್ ಬೈಕ್; ಡಿಕ್ಕಿ ಹೊಡೆದ ಕಾರು, ಇಬ್ಬರು ಗಂಭೀರ

- Advertisement -
- Advertisement -

ಮಂಗಳೂರು: ಮೂರು ಜನ ಸವಾರರಿದ್ದ ಬೈಕ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಲಾಗಿ ಬಂದ ಕಾರಣ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಸುರತ್ಕಲ್ ಬಳಿ ಈ ಅಪಘಾತ ಸಂಭವಿಸಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ

ಹೆಲ್ಮೆಟ್ ಧರಿಸದೇ ನಿರ್ಲಕ್ಷ್ಯದಿಂದ ಬೈಕ್ ನಲ್ಲಿ ತ್ರಿಬಲ್ ರೈಡ್ ಪ್ರಯಾಣ ಮಾಡುತ್ತಿದ್ದ ಬೈಕ್ ಸವಾರರು ರಾಂಗ್ ಸೈಡ್ ನಲ್ಲಿ ಹೆದ್ದಾರಿಗೆ ಬೈಕ್ ನುಗ್ಗಿಸಿದ್ದಾರೆ.

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರು ದೂರಕ್ಕೆ ಎಸೆಯಲ್ಪಟ್ಟಿದ್ದು, ಮೂವರ ಪೈಕಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

- Advertisement -

Latest News

error: Content is protected !!