Saturday, June 6, 2026
Homeಕರಾವಳಿಉಡುಪಿಉಡುಪಿ: ಶೋ ರೂಂ ಎದುರು ನಿಲ್ಲಿಸಿದ್ದ ಕಾರಿಗೆ ಬೈಕ್ ಡಿಕ್ಕಿ; ಸವಾರ ಸಾವು

ಉಡುಪಿ: ಶೋ ರೂಂ ಎದುರು ನಿಲ್ಲಿಸಿದ್ದ ಕಾರಿಗೆ ಬೈಕ್ ಡಿಕ್ಕಿ; ಸವಾರ ಸಾವು

- Advertisement -
- Advertisement -

ಉಡುಪಿ: ನಿಲ್ಲಿಸಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ದುರ್ಘಟನೆ ಉಡುಪಿಯಲ್ಲಿ ನಡೆದಿದೆ.ನಿನ್ನೆ ತಡರಾತ್ರಿ ಅಪಘಾತ ಸಂಭವಿಸಿದ್ದು, ಸಿಸಿ ಕ್ಯಾಮರಾದಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ.

ಉಡುಪಿ ತಾಲೂಕಿನ ನಿಟ್ಟೂರು ಹುಂಡೈ ಶೋರೂಂ ಬಳಿ ಅಪಘಾತ ನಡೆದಿದ್ದು,ಬೈಕ್ ಸವಾರ ಸ್ವಸ್ತಿಕ್ (21) ಮೃತಪಟ್ಟಿದ್ದಾನೆ.

ಅತೀ ವೇಗವಾಗಿ ಬಂದ ಬೈಕ್ ಸವಾರನ ನಿಯಂತ್ರಣ ತಪ್ಪಿ ಶೋ ರೂಂ ಹೊರಗಡೆ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

ವೇಗವಾಗಿ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನುಜ್ಜುಗುಜ್ಜಾಗಿದ್ದು,ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸ್ವಸ್ತಿಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಉಡುಪಿ ಸಂಚಾರ ಪೋಲಿಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!