- Advertisement -


- Advertisement -
ಕಾಪು: ಬೈಕ್ ಗೆ ಕಾರು ಢಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಕೆ 1 ಹೊಟೇಲ್ ಜಂಕ್ಷನ್ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ.
ಬೈಕ್ ಸವಾರ ಕಡಿಯಾಳಿ ನಿವಾಸಿ ಸುರೇಶ್ ತೀವ್ರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ವಿವರ: ಬೈಕ್ ಉಡುಪಿಯಿಂದ ಕಾಪು ಕಡೆಗೆ ಬರುತ್ತಿದ್ದು, ಅದೇ ದಿಕ್ಕಿನಲ್ಲಿ ಬರುತ್ತಿದ್ದ ಕೇರಳ ನೋಂದಾವಣೆಯ ಕಾರು ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡ ಗಾಯಾಳುವನ್ನು ಆಪದ್ಭಾಂಧವ ಸೂರಿ ಶೆಟ್ಟಿ ನೇತೃತ್ವದಲ್ಲಿ ಅಂಬುಲೆನ್ಸ್ ಚಾಲಕ ನಾಗರಾಜ್ ಕಾಪು ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -


