Friday, June 5, 2026
Homeಕರಾವಳಿಸುಳ್ಯ: ಜೀಪ್ ಹಾಗೂ ಬೈಕ್ ಮಧ್ಯೆ ಅಪಘಾತ; ಗಂಭೀರ ಗಾಯಗೊಂಡ ಬೈಕ್ ಸವಾರ ಸಾವು

ಸುಳ್ಯ: ಜೀಪ್ ಹಾಗೂ ಬೈಕ್ ಮಧ್ಯೆ ಅಪಘಾತ; ಗಂಭೀರ ಗಾಯಗೊಂಡ ಬೈಕ್ ಸವಾರ ಸಾವು

- Advertisement -
- Advertisement -

ಸುಳ್ಯ: ಜೀಪ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡು ಬೈಕ್ ಸವಾರ ಮೃತಪಟ್ಟಿರುವ ಘಟನೆ ಅಜ್ಜಾವರದಲ್ಲಿ ನಡೆದಿದೆ.ಅಜ್ಜಾವರ ಪಡ್ಡಂಬೈಲು ಕೆಎಫ್ ಡಿಸಿ ಉದ್ಯೋಗಿ ವಿನಾಯಕ ಮೂರ್ತಿ( 52) ಮೃತ ದುರ್ದೈವಿ.

 ವಿನಾಯಕ ಮೂರ್ತಿ ಹಾಗೂ ಪತ್ನಿ ಮಂಜುಳಾ ಕೆಲಸ ಮುಗಿಸಿ ಮನೆಗೆ ವಾಪಾಸ್ಸಾಗುತ್ತಿರುವಾಗ ಘಟನೆ ನಡೆದಿದೆ ಎನ್ನಲಾಗಿದೆ.ತಕ್ಷಣವೇ ಆಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದ್ದರೂ ಗಂಭೀರವಾಗಿ ಗಾಯಗೊಂಡಿದ್ದ ವಿನಾಯಕ ಮೂರ್ತಿ ಮೃತಪಟ್ಟಿದ್ದಾರೆ. ಮಂಜುಳಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಸ್ಥಳಾಂತರಿಸಿರುವುದಾಗಿ ತಿಳಿದುಬಂದಿದೆ.

ಮೃತರು ಪತ್ನಿ ಒಬ್ಬ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Latest News

error: Content is protected !!