Saturday, June 6, 2026
Homeತಾಜಾ ಸುದ್ದಿಮೂಡಬಿದಿರೆ: ಬೈಕ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸವಾರ ಸಾವು

ಮೂಡಬಿದಿರೆ: ಬೈಕ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸವಾರ ಸಾವು

- Advertisement -
- Advertisement -

ಮೂಡಬಿದಿರೆ: ಬೈಕ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ರಾ.ಹೆದ್ದಾರಿಯ ತೋಡಾರಿನಲ್ಲಿ ನಡೆದಿದೆ. ಸಿದ್ಧಕಟ್ಟೆ ನಿವಾಸಿ, ಮೇಸ್ತ್ರಿ ಕೆಲಸ ಮಾಡುತ್ತಿದ್ದ ಮೋಹನ್‌ ಗೌಡ (45) ಮೃತ ವ್ಯಕ್ತಿ.ಸಹ ಸವಾರ ನಾರಾಯಣ ಗೌಡ ಸಣ್ಣಪುಟ್ಟ ಗಾಯಗಳೊಂದಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇವರಿಬ್ಬರೂ ಮೂಡಬಿದಿರೆಯಲ್ಲಿ ನಡೆದಿದ್ದ ಮದುವೆಯಲ್ಲಿ ಭಾಗವಹಿಸಿ ಅಲ್ಲಿಂದ ಮಿಜಾರು ಧೂಮಚಡವಿನಲ್ಲಿ ನಡೆಯುತ್ತಿದ್ದ ಇನ್ನೊಂದು ಮದುವೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ತೋಡಾರು ಮೈಟ್‌ ಕಾಲೇಜು ಸಮೀಪ ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಪಾಲಡ್ಕದ ನಿವಾಸಿ, ಮೂರನೇ ವರ್ಷದ ಎಂಜಿನಿಯರಿಂಗ್‌ ವಿದ್ಯಾರ್ಥಿ ಏರನ್‌ ಮಥಾಯಸ್‌ ಚಲಾಯಿಸುತ್ತಿದ್ದ ವ್ಯಾಗನ್‌ ಆರ್‌ ಕಾರು ರಸ್ತೆಯ ಬಲಭಾಗಕ್ಕೆ ಬಂದು ಬೈಕ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಮೋಹನ್‌ ಗೌಡ ಅವರನ್ನು ಮೂಡಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸುವ ಸಂದರ್ಭದಲ್ಲಿ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.ಮೂಡುಬಿದಿರೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!