Saturday, June 13, 2026
Homeಕರಾವಳಿಮಂಗಳೂರುಮಂಗಳೂರು; ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬಸ್ಸಿನಡಿಗೆ ಬಿದ್ದು ಬೈಕ್ ಸವಾರ ಸಾವು

ಮಂಗಳೂರು; ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬಸ್ಸಿನಡಿಗೆ ಬಿದ್ದು ಬೈಕ್ ಸವಾರ ಸಾವು

- Advertisement -
- Advertisement -

ಮಂಗಳೂರು; ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬಸ್ಸಿನಡಿಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದೆ. ಕಾನ ನಿವಾಸಿ ರೆಮ್ಮಿ (38) ಮೃತ ಬೈಕ್ ಸವಾರ.

ರೆಮ್ಮಿ  ಕುಳಾಯಿಯಲ್ಲಿ ಟ್ಯೂಶನ್‌ಗೆ ತೆರಳಿದ್ದ ಮಗಳನ್ನು ಕರೆತರಲೆಂದು ರೆಮ್ಮಿ ತನ್ನ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಸಂಚರಿಸುತ್ತಿದ್ದರೆನ್ನಲಾಗಿದೆ. ಕುಳಾಯಿಗುಡ್ಡೆ ಜಂಕ್ಷನ್ ಬಳಿ ವಾಹನಗಳ ತಪಾಸಣೆಯಲ್ಲಿ ನಿರತರಾಗಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸರು ರೆಮ್ಮಿ ಅವರನ್ನು ಬೆನ್ನಟ್ಟಿ ಹಿಡಿಯಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ರೆಮ್ಮಿ ಸುರತ್ಕಲ್ ಕಡೆಗೆ ಅತಿ ವೇಗದಿಂದ ತನ್ನ ದ್ವಿಚಕ್ರ ವಾಹನವನ್ನು ತಿರುಗಿಸಿದಾಗ ಎದರುರಿನಿಂದ ಬರುತ್ತಿದ್ದ ಖಾಸಗಿ ಸಿಟಿ ಬಸ್ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಅಪಘಾತದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ರೆಮ್ಮಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!