Saturday, June 6, 2026
Homeಕರಾವಳಿವಿಟ್ಲ: ಟಿಪ್ಪರ್ ಲಾರಿ ಹಾಗೂ ಬೈಕ್ ಮಧ್ಯೆ ಅಪಘಾತ; ಗಾಯಗೊಂಡಿದ್ದ ಯುವಕ ಸಾವು

ವಿಟ್ಲ: ಟಿಪ್ಪರ್ ಲಾರಿ ಹಾಗೂ ಬೈಕ್ ಮಧ್ಯೆ ಅಪಘಾತ; ಗಾಯಗೊಂಡಿದ್ದ ಯುವಕ ಸಾವು

- Advertisement -
- Advertisement -

ವಿಟ್ಲ;ಟಿಪ್ಪರ್ ಲಾರಿ ಹಾಗೂ ಬೈಕ್ ನ ಮಧ್ಯೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ. ಮಾಣಿಲ ನಿವಾಸಿ ಮನೋಜ್ ಪೂಜಾರಿ (26 )ಮೃತ ದುರ್ದೈವಿ.

ಮನೋಜ್ ಅಮರ್‌ ಕನ್ಸ್ ಸ್ಟ್ರೆಕ್ಷನ್ ನಲ್ಲಿ ಸಿವಿಲ್ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಇವರು ವಿಟ್ಲ ಕಡೆಯಿಂದ ಬಂದ ಟಿಪ್ಪರ್ ಲಾರಿ ಬೇರೊಂದು ವಾಹನವನ್ನು ಓವರ್ ಟೆಕ್ ಮಾಡುವ ಭರದಲ್ಲಿ ವೀರಕಂಬ ಗ್ರಾಮದ ಬಳಿ   ಬೈಕ್ ಗೆ ಡಿಕ್ಕಿ ಹೊಡೆದಿತ್ತು.

ಡಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಸವಾರನನ್ನು ಸ್ಥಳೀಯರು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಡಿ.4ರಂದು ಮೃತಪಟ್ಟರು ಎಂದು ತಿಳಿದುಬಂದಿದೆ. ಅಪಘಾತ ನಡೆದ ವೇಳೆ ರಸ್ತೆ ಬದಿಯಲ್ಲಿ ನಡೆದು ಕೊಂಡು ಹೋಗುತ್ತಿದ್ದ  ಪಾದಚಾರಿಯೊಬ್ಬರಿಗೂ ಗಾಯವಾಗಿದೆ.ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!