- Advertisement -
![]()
- Advertisement -
ಪಡುಬಿದ್ರೆ ಬೈಕ್ ಸವಾರನ ನಿಯಂತ್ರಣ ತಪ್ಪಿ ಬೈಕ್ ಕಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎರ್ಮಾಳು ಗರೋಡಿ ಸಮೀಪ ಈ ಘಟನೆ ನಡೆದಿದೆ.
ಬೈಕ್ ಸವಾರ ಎರ್ಮಾಳು ಗುಜ್ಜಿ ನಿವಾಸಿ ಸೈಫಾನ್ ಗಂಭೀರ ಗಾಯಗೊಂಡಿದ್ದಾರೆ.ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಡುಬಿದ್ರಿ ಕಡೆಯಿಂದ ಎರ್ಮಾಳಿನ ತನ್ನ ಮನೆಗೆ ಬರುತ್ತಿದ್ದ ಎನ್ನಲಾಗಿದೆ. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಕಲ್ಲಿಗೆ ಢಿಕ್ಕಿ ಹೊಡೆಯಿತು. ಬೈಕ್ ಢಿಕ್ಕಿ ಹೊಡೆದ ಕೂಡಲೇ ಬೈಕ್ನಲಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಗಾಯಾಳುವನ್ನು ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ.
- Advertisement -


