- Advertisement -
- Advertisement -
ಮಂಗಳೂರು; ಕಾರು ಚಾಲಕನ ನಿರ್ಲಕ್ಷ್ಯಕ್ಕೆ ಬೈಕ್ ಸವಾರ ಬಲಿಯಾಗಿರುವ ಘಟನೆ ಪಡೀಲ್ ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗದ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ನಮ್ಮ ಕುಡ್ಲ – ವಿಜಾರ್ಡ್ ಕೇಬಲ್ ನೆಟ್ವರ್ಕ್ ನಲ್ಲಿ ಟೆಕ್ನೀಶಿಯನ್ ಯಾಗಿದ್ದ ಕಲ್ಲಾಪು ನಿವಾಸಿ ಹರೀಶ್ (43) ಮೃತ ದುರ್ದೈವಿ.
ಹರೀಶ್ ರಸ್ತೆ ಬದಿ ಬೈಕ್ ನಿಲ್ಲಿಸಿ ಮಾತನಾಡುತ್ತಿದ್ದ ವೇಳೆ ಬಂಟ್ವಾಳ ಕಡೆಯಿಂದ ಹೆದ್ದಾರಿಯಲ್ಲಿ ಬಂದ ಡಸ್ಟರ್ ಕಾರು ನಿಯಂತ್ರಣ ತಪ್ಪಿ ಬಲಬದಿಯ ಡಿವೈಡರ್ ಗೆ ಡಿಕ್ಕಿಯಾಗಿ ಹರೀಶ್ ಅವರ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಯಿಂದ ದೂರಕ್ಕೆ ಎಸೆಯಲ್ಪಟ್ಟು ತಲೆಯ ಭಾಗಕ್ಕೆ ತೀವ್ರ ಗಾಯಗೊಂಡಿದ್ದ ಹರೀಶ್ ಅವರನ್ನು ಕೂಡಲೇ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತ ಹರೀಶ್ ಪತ್ನಿ , ಇಬ್ಬರು ಗಂಡು ಮಕ್ಕಳು, ತಾಯಿ, ಓರ್ವ ಸಹೋದರ, ಇಬ್ಬರು ಸಹೋದರಿಯರನ್ನ ಅಗಲಿದ್ದಾರೆ.
- Advertisement -