- Advertisement -
![]()
- Advertisement -
ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು ನಿವಾಸಿ ಹಸನ್ ಬಾವ (55) ಹಾಗೂ ಬಂಟ್ವಾಳ ಬಿ ಮೂಡಾ ನಿವಾಸಿ ಮೊಹಮ್ಮದ್ ಇರ್ಷಾದ್ (37) ಬಂಧಿತರು. ಬಂಧಿತರಿಂದ ಕಳ್ಳತನ ಮಾಡಿದ್ದ ಅಂದಾಜು ರೂ 50,000/- ಮೌಲ್ಯದ ಸ್ಕೂಟರ್ ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ದಿನಾಂಕ:21-03-2026 ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪರ್ಲಿಯಾ ಎಂಬಲ್ಲಿ ವಸತಿಗೃಹದ ಶೆಡ್ ನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಅ.ಕ್ರ :37/2026, ಕಲಂ:303(2) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
- Advertisement -


