Saturday, June 13, 2026
Homeಕರಾವಳಿಮಂಗಳೂರುಮಂಗಳೂರು; ಬೈಕ್ ಕಳ್ಳತನ ಮಾಡುತ್ತಿದ್ದಾತನ ಬಂಧನ

ಮಂಗಳೂರು; ಬೈಕ್ ಕಳ್ಳತನ ಮಾಡುತ್ತಿದ್ದಾತನ ಬಂಧನ

- Advertisement -
- Advertisement -

ಮಂಗಳೂರು; ಬೈಕ್ ಕಳ್ಳತನ ಮಾಡುತ್ತಿದ್ದಾತನನ್ನು ಮಂಗಳೂರಿನ  ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಕುಂದಾಪುರ ಸಾಸ್ತಾನ ಹೈರೋಡಿ ಗೋಳಿಬೆಟ್ಟು ನಿವಾಸಿ ಪ್ರಹ್ಲಾದ್ (30)  ಬಂಧಿತ ಆರೋಪಿ.

ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾ. 28ರ‌ಂದು ಮುಂಜಾನೆ ಎಎಸ್ಸೈ ರಾಮ ಪೂಜಾರಿ ಮತ್ತು ಸಿಬ್ಬಂದಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಪ್ರಹ್ಲಾದ್ ನನ್ನು ನಿಲ್ಲಿಸಿ ತಪಾಸಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಆರೋಪಿ ಬಳಿ ದ್ವಿಚಕ್ರ ವಾಹನದ ದಾಖಲೆ ಪತ್ರಗಳಿಲ್ಲದ ಹಿನ್ನೆಲೆಯಲ್ಲಿ ವಿಚಾರಣೆ ತೀವ್ರಗೊಳಿಸಿದಾಗ ಬಂಟ್ವಾಳ ತಾಲೂಕಿನ ಮೆಲ್ಕಾರ್ ನಿಂದ ಕಳವು ಗೈದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಯ ವಿರುದ್ಧ ಈಗಾಗಲೇ ಕುಂದಾಪುರ ಪೊಲೀಸ್ ಠಾಣೆ, ಮಂಗಳೂರು ಉತ್ತರ ಪೊಲೀಸ್ ಠಾಣೆ, ಕೋಟ, ಬ್ರಹ್ಮಾವರ, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕಳ್ಳತನ ಹಾಗೂ ಬೈಕ್ ಕಳವುಗೈದಿರುವ ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ‌. ಆರೋಪಿಯ ವಿರುದ್ಧ ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

- Advertisement -

Latest News

error: Content is protected !!