Thursday, June 25, 2026
Homeಕರಾವಳಿಮಂಗಳೂರುಬೆಳ್ತಂಗಡಿ : ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ: ವೇಣೂರು ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ : ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ: ವೇಣೂರು ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

ಬೆಳ್ತಂಗಡಿ : ನಿಲ್ಲಿಸಿ ಹೋಗಿದ್ದ ಬೈಕ್ ಕಳ್ಳತನ ಮಾಡಿದ ಪ್ರಕರಣವನ್ನು ವೇಣೂರು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನ.11 ರಂದು ರಾತ್ರಿ ಕುಕ್ಕೇಡಿ ನಿವಾಸಿ ಸಂಪತ್ ಕುಮಾರ್ ಪೆಟ್ರೋಲ್ ಖಾಲಿಯಾಗಿದ ಕಾರಣದಿಂದ‌ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿಟ್ಟಡೆ ಗ್ರಾಮದ ಪಾಣೂರು ಗುರುನಾರಾಯಣ ಸರ್ಕಲ್ ಬಳಿ ತಮ್ಮ KA-18-J-6348 ಬೈಕ್ ನಿಲ್ಲಿಸಿ ಹೋಗಿದ್ದರು. ಬಳಿಕ ನ.12 ರಂದು ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಈ ಬಗ್ಗೆ ಎಲ್ಲಾ ಕಡೆ ಹುಡುಕಾಟ ನಡೆಸಿದ್ರೂ ಬೈಕ್ ಪತ್ತೆಯಾಗದ ಕಾರಣ ನ.13 ರಂದು ವೇಣೂರು ಪೊಲೀಸ್ ಠಾಣೆಯಲ್ಲಿ 88/25 ಕಲಂ ನಲ್ಲಿ ಸಂಪತ್ ಕುಮಾರ್ ಪ್ರಕರಣ ದಾಖಲಿಸಿದ್ದರು‌.

ವೇಣೂರು ಸಬ್ ಇನ್ಸ್‌ಪೆಕ್ಟರ್ ಓಮನ ಮತ್ತು ಸಿಬ್ಬಂದಿ ನ.20 ರಂದು ಸಂಜೆ 6:30 ರ ಸಮಯದಲ್ಲಿ ವೇಣೂರು ಗ್ರಾಮದ ಕೆರೆಕೋಡಿ ಕರ್ತವ್ಯ ವೇಳೆ ಇಬ್ಬರು ಯುವಕರು ನಂಬರ್ ಪ್ಲೇಟ್ ಇಲ್ಲದ ಬೈಕ್ ನಲ್ಲಿ ಬರುತ್ತಿದ್ದಾಗ ತಡೆದು ನಿಲ್ಲಿಸಿ ತಪಾಸಣೆ ಮಾಡಿದಾಗ ಯಾವುದೇ ದಾಖಲೆಗಳು ಇಲ್ಲದಿರುವುದು ಬೆಳಕಿಗೆ ಬಂದಿದೆ.

ಬೈಕ್ ವಶಕ್ಕೆ ಪಡೆದುಕೊಂಡು ಇಬ್ಬರನ್ನು ಕೂಡ ವೇಣೂರು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದಾಗ ನ.10 ರಂದು ರಾತ್ರಿ ಗುರುನಾರಾಯಣ ಸರ್ಕಲ್ ಬಳಿ ನಿಲ್ಲಿಸಿದ ಬೈಕ್ ಕಳ್ಳತನ ಮಾಡಿರುವುದಾಗಿ ಬಾಯಿಬಿಟ್ಟಿದ್ದಾರೆ. ಬಂಧಿತ ಆರೋಪಿಗಳಲ್ಲಿ ಓರ್ವ ಇರ್ಷಾದ್ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಮತ್ತು ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಗಾಂಜಾ ಪ್ರಕರಣ ದಾಖಲಾಗಿದೆ‌.

ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದ ಕೆರೆಕೋಡಿ ನಿವಾಸಿ ಮಹಮ್ಮದ್ ಇರ್ಷಾದ್(25) ಮತ್ತು ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ನಿವಾಸಿ ಸಾದಿಕ್ ಖಾನ್(26) ಬಂಧಿತ ಆರೋಪಿಗಳು. ಇಬ್ಬರು ಆರೋಪಿಗಳನ್ನು ನ.21 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ, ಬೆಳ್ತಂಗಡಿ ಇನ್ಸ್‌ಪೆಕ್ಟರ್ ಸುಬ್ಬಪುರ್ ಮಠ್ ನೇತೃತ್ವದಲ್ಲಿ, ವೇಣೂರು ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಮತ್ತು ಸಬ್ ಇನ್ಸ್‌ಪೆಕ್ಟರ್ ಓಮನ ,ಎಎಸ್ಐ ವೆಂಕಟೇಶ್ ನಾಯ್ಕ್, ಸಿಬ್ಬಂದಿ ಮೋಹನ್, ಬಸವರಾಜ್, ಕೃಷ್ಣ, ಕೇಶವತಿ, ನಾಗರಾಜಪ್ಪ,ರಾಕೇಶ್,ಈರ ನಾಯ್ಕ್ ಹಾಗೂ ಚಾಲಕ ಕಿರಣ್ ಕಾರ್ಯಾಚರಣೆ ಭಾಗವಹಿಸಿದರು.

- Advertisement -

Latest News

error: Content is protected !!