Saturday, June 6, 2026
Homeಕರಾವಳಿಮಂಗಳೂರು; ದ್ವಿಚಕ್ರ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಬಂಧನ

ಮಂಗಳೂರು; ದ್ವಿಚಕ್ರ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಬಂಧನ

- Advertisement -
- Advertisement -

ಮಂಗಳೂರು:ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ್ಲಿ 4 ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪಣಂಬೂರು ನಿವಾಸಿ ಮೊಹಮ್ಮದ್ ಸಿನಾನ್(19), ಬೆಂಗ್ರೆಯ ಮೊಹಮ್ಮದ್ ಸಾಹಿಲ್ (22), ಫೈಜಲ್ತೋಟ ಫೈಸಲ್(35), ಮೊಹಮ್ಮದ್ ಸಾಹಿಲ್(18) ಬಂಧಿತರು. ಇವರಿಂದ 6 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.ಮಂಗಳೂರಿನ ಗೂಡ್ ಶೆಡ್ ನಲ್ಲಿ ನಂಬರ್‌ ಪ್ಲೇಟ್ ಇಲ್ಲದ ದ್ವಿಚಕ್ರ ವಾಹನಗಳನ್ನು ಮಾರಾಟಕ್ಕೆ ಯತ್ನದ ಬಗ್ಗೆ ಪೊಲೀಸರಿಗೆ ಸಿಕ್ಕಿದ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಮತ್ತು ವಶಪಡಿಸಿಕೊಂಡ ದ್ವಿಚಕ್ರ ವಾಹನಗಳನ್ನು ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.ಆರೋಪಿಗಳ ಬಗ್ಗೆ ಹೆಚ್ಚಿನ ವಿಚಾರಣೆ ನಡೆಯುತ್ತಿದೆ

- Advertisement -

Latest News

error: Content is protected !!