- Advertisement -
- Advertisement -
ಮಂಜೇಶ್ವರ: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ಸಂಜೆ ವರ್ಕಾಡಿ ಬಳಿ ನಡೆದಿದೆ.
ಕೊಡ್ಲಮೊಗರು ನಿವಾಸಿ ಮುಹಮ್ಮದ್ ಟಿ. ಮೃತರು.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಹಮ್ಮದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಕುರಿತು ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಾರು ಮತ್ತು ಚಾಲಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
- Advertisement -


