Thursday, June 4, 2026
Homeಕರಾವಳಿಮಂಗಳೂರುಮಂಗಳೂರು: ಮಳೆಯಿಂದಾಗಿ ಲಾರಿಯಡಿಗೆ ಬಿದ್ದು ಬೈಕ್ ಸವಾರ ದುರ್ಮರಣ

ಮಂಗಳೂರು: ಮಳೆಯಿಂದಾಗಿ ಲಾರಿಯಡಿಗೆ ಬಿದ್ದು ಬೈಕ್ ಸವಾರ ದುರ್ಮರಣ

- Advertisement -
- Advertisement -

ಮಂಗಳೂರು: ಭಾರೀ ಮಳೆಯಿಂದಾಗಿ ಮಂಗಳೂರಿನಲ್ಲಿ ಬೈಕ್ ಸವಾರ ಲಾರಿಯ ಅಡಿಗೆ ಬಿದ್ದು ಮೃತಪಟ್ಟಿರುವ ದುರ್ಘಟನೆ ನಡೆದಿದೆ.ನಂತೂರು ಜಂಕ್ಷನ್ ನಲ್ಲಿ ಈ ಅಪಘಾತ ಸಂಭವಿಸಿದ್ದು, ಲಾರಿ ಅಡಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಎಡೆಬಿಡದೇ ಬೀಳುತ್ತಿರುವ ಮಳೆಯಿಂದಾಗಿ ಮಂಗಳೂರು ನಗರದ ರಸ್ತೆಗಳಲ್ಲಿ ನೀರು ತುಂಬಿ ಹರಿಯುತ್ತಿದ್ದು, ವಾಹನ ಸವಾರರು ಸಂಚಾರಕ್ಕೆ ಹರಸಾಹಸ ಪಡುವಂತಾಗಿದೆ.

ಮಳೆಯಿಂದಾಗಿ ಕತ್ತಲಿನ ವಾತಾವರಣ ನಿರ್ಮಾಣವಾಗಿದ್ದು, ವಾಹನಗಳ ಹೆಡ್ ಲೈಟ್ ಆನ್ ಮಾಡಿಕೊಂಡು ವಾಹನ ಚಲಾಯಿಸಬೇಕಾದ ಅನಿವಾರ್ಯತೆ ಉಂಟಾಗಿದೆ.ಅಲ್ಲದೇ ರಸ್ತೆಯ ಮೇಲೆ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ನುಗ್ಗುವ ಭೀತಿ ಉಂಟಾಗಿದೆ.

- Advertisement -

Latest News

error: Content is protected !!